ಮುಂದಿನ 10 ದಿನಗಳ ಕಾಲ ಭರ್ಜರಿ ಮಳೆ , ಎಲ್ಲೆಲ್ಲಾ ಆರೆಂಜ್‌ ಎಲರ್ಟ್…?

October 23, 2025
5:05 PM

ರಾಜ್ಯದ ವಿವಿಧೆಡೆ ರಾತ್ರಿಯಿಂದ ಮಳೆಯಾಗುತ್ತಿದ್ದು,  ಮುಂದಿನ 10 ದಿನಗಳ ಕಾಲ  ಮಳೆಯಾಗುವ ಮುನ್ಸೂಚನೆ ಇದೆ  ಎಂದು ಭಾರತೀಯ  ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಉಳಿದ 24 ಜಿಲ್ಲೆಗಳಲ್ಲಿಯೂ ಸಾಧಾರಾಣ ಮಳೆಯಾಗಲಿರುವ ಹಿನ್ನಲೆಯಲ್ಲಿ ಎಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್​ ಎಲರ್ಟ್​ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಮುನ್ನೆಚ್ಚರಿಕೆಯಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ತಮಿಳುನಾಡು, ಪುದುಚೇರಿ, ಕಾರಕಲೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಎಲರ್ಟ್ ಘೋಷಿಸಲಾಗಿದೆ.  ಆಂಧ್ರಪ್ರದೇಶ, ಕರಾವಳಿ ಕರ್ನಾಟಕ, ಅಂಡಮಾನ್- ನಿಕೋಬಾರ್, ಕೇರಳ, ಲಕ್ಷದ್ವೀಪ, ಒಡಿಶಾ ರಾಜ್ಯಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ
October 6, 2026
6:55 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror