ಕೊಡಗು ಜಿಲ್ಲೆಯ ಕಾಫಿ ತೋಟಗಳಲ್ಲಿ ದಾಂಧಲೆ ನಡೆಸುತ್ತಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಗೋಣಿಕೊಪ್ಪ ಬಳಿಯ ಚೆನ್ನಂಗೊಲ್ಲಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಸಾವಿಗೆ ಕಾರಣವಾಗಿದ್ದ ಕಾಡಾನೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದ್ದರು. ಕಾಫಿ ತೋಟದಲ್ಲಿ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಏಳು ಸಾಕಾನೆಗಳ ನೆರವಿನಿಂದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಸೆರೆಸಿಕ್ಕಿದ ಕಾಡಾನೆಯನ್ನು ದುಬಾರೆಯಲ್ಲಿನ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel