ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆ ಹಾಗೂ ಕಲ್ಲಡ್ಕದ ಶ್ರೀ ರಾಮ ವಿದ್ಯಾ ಕೇಂದ್ರ ಟ್ರಸ್ಟ್-ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ 2022-2023ನೇ ಸಾಲಿನ ಸಾವಯುವ ಸಿರಿ ಯೋಜನೆಯಡಿ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದಲ್ಲಿ ಫೆ.10ರಿಂದ 12ರವರೆಗೆ ಯಂತ್ರಮೇಳದೊಂದಿಗೆ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ.ಫೆ.10 ರಂದು ವಿಚಾರ ಸಂಕಿರಣ ನಡೆಯಲಿದೆ.
ರೈತರು, ಸಾವಯುವ ಉತ್ಪನ್ನಗಳ ಉತ್ಪಾದಕರು, ಮಾರುಕಟ್ಟೆದಾರರು, ಸಾವಯುವ ಉತ್ಪನ್ನಗಳ ಮಳಿಗೆಗಳನ್ನು ಹಾಕಲು ಇಚ್ಛಿಸುವವರು ತಮ್ಮ ಮಾಹಿತಿಯನ್ನು ಮತ್ತು ಉತ್ಪನ್ನಗಳ ವಿವರಗಳನ್ನು ಮಂಗಳೂರಿನ ಉಪ ಕೃಷಿ ನಿರ್ದೇಶಕರು-1 ಅವರ ಕಚೇರಿಯನ್ನು ಸಂಪರ್ಕಿಸಿ ಫೆ.8ರೊಳಗೆ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0824-2442311, 9110423481ಗೆ ಕರೆ ಮಾಡುವಂತೆ ಕೃಷಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಫೆ.10 ರಿಂದ ಪುತ್ತೂರಿನಲ್ಲಿ ಸಾವಯುವ ಸಿರಿ ಕಾರ್ಯಾಗಾರ"