ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು ಬಳಸದಂತೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ್ ಸಲಹೆ ನೀಡಿದ್ದಾರೆ. ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಹೆಚ್ಚಿನ ಔಷಧಿ ಮತ್ತು ರಾಸಾಯನಿಕಗಳನ್ನು ತಮ್ಮ ಬೆಳೆಗಳಗಾಗಿ ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯುವ ಮನೋಭಾವ ಬಿಡಬೇಕು. ರೈತರು ಸಾವಯವ ರಸಗೊಬ್ಬರ ಮತ್ತು ಸಿರಿಧಾನ್ಯಗಳಂತಹ ಬೆಳೆಗಳಿಗೆ ಒತ್ತು ನೀಡಬೇಕು ಎಂದು ಕರೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel