ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ

October 14, 2025
9:43 PM

ಯುವನಿಧಿ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಬೇಕು. ಯುವನಿಧಿ ಬಗ್ಗೆ ಅರಿವು ಮೂಡಿಸಲು ಯುವಜನತೆಗೆ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು  ಎಂದು ದ ಕ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.

ಅವರು ಮಂಗಳವಾರ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ನಡೆದ ಜಿಲ್ಲಾ  ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಗತಿ ಪರಿಶೀಲನಾ ಸಭೆಯ  ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಲು ಸಮಸ್ಯೆಯಾದಲ್ಲಿ ಇಲಾಖೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಫಲಾನುಭವಿಗಳಿಗೆ  ನೆರವು ನೀಡಬೇಕು ಎಂದು ಸೂಚಿಸಿದ್ದಾರೆ. ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನ ಮಾಡಲು ಸಮಿತಿಯ ಎಲ್ಲಾ ಸದಸ್ಯರು ತಮ್ಮ ಹಂತದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಭರತ್‌ ಮುಂಡೋಡಿ ಹೇಳಿದರು.

ಅಪಘಾತ ತಡೆಗಟ್ಟಲು ಘಟಕಗಳಲ್ಲಿ ಚಾಲನಾ ಸಿಬ್ಬಂದಿಗಳಿಗೆ ಸುರಕ್ಷಿತ ಚಾಲನೆಯ ಕುರಿತು ನಿರಂತರವಾಗಿ ಸೂಕ್ತ ತಿಳುವಳಿಕೆಯನ್ನು ಈಗಾಗಲೇ ಘಟಕ/ವಿಭಾಗೀಯ ಮಟ್ಟದಲ್ಲಿ ನೀಡುತ್ತಾ ಬರುತ್ತಿದ್ದು ಹಾಗೂ ನಿಗಮದ ತರಬೇತಿ ಕೇಂದ್ರಗಳಲ್ಲಿಯೂ ಸಹ ತರಬೇತಿಗಳನ್ನು ನೀಡುವ ಮೂಲಕ ಅಗತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು  ಕೆ.ಎಸ್.ಆರ್.ಟಿ.ಸಿ  ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು ಪರವಾನಗಿಯನ್ನು ದುರುಪಯೋಗ  ಪಡಿಸಿಕೊಂಡು  ಓಡಾಡುತ್ತಿದ್ದು,  ಬಸ್ಸಿನ ಪರವಾನಗಿಯನ್ನು ರದ್ದು ಮಾಡುವಂತೆ  ಹಾಗೂ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ನೇತೃತ್ವದಲ್ಲಿ ಮೈಸೂರು ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.

Advertisement


ಸಭೆಯಲ್ಲಿ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ನರ್ವಾಡೆ ವಿನಾಯಕ್  ಕಾರ್ಭಾರಿ,  ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ  ಜಯಲಕ್ಷ್ಮಿ,  ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಸುಷ್ಮಾ ಕೆ ಎಸ್,   ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಉಪಾಧ್ಯಕ್ಷ  ಜೋಕಿಂ ಡಿಸೋಜಾ, ಸುರೇಖಾ ಚಂದ್ರಹಾಸ್,  ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿ. ಎ, ಶಾಹುಲ್ ಹಮೀದ್   ಕೆ, ಉಮಾನಾಥ್ ಶೆಟ್ಟಿ, ಬಿ ಪದ್ಮನಾಭ ಸಾಲ್ಯಾನ್ , ಸುರೇಂದ್ರ ಕಂಬಳಿ, ರಂಜಿತ್ ರೈ, ಆಲ್‍ಸ್ಟನ್ ಕ್ಲೈವ್ ಡಿಕುನ್ಹ, ವಿವಿಧ ಇಲಾಖಾಧಿಕಾರಿಗಳು  ಉಪಸ್ಥಿತರಿದ್ದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರೈತರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ ; ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಆದ್ಯತೆ
November 10, 2025
7:32 AM
by: ದ ರೂರಲ್ ಮಿರರ್.ಕಾಂ
ಇಲಿಗಳ ಕಾಟಕ್ಕೆ ಇಲ್ಲಿದೆ ಸುಲಭ ಪರಿಹಾರ…!
November 10, 2025
7:26 AM
by: ರೂರಲ್‌ ಮಿರರ್ ಸುದ್ದಿಜಾಲ
ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಕ್ಯಾನ್ಸರ್ ಪ್ರತಿಬಂಧಕ – ಅಧ್ಯಯನ ವರದಿ
November 10, 2025
7:16 AM
by: ರೂರಲ್‌ ಮಿರರ್ ಸುದ್ದಿಜಾಲ
ಪಶ್ಚಿಮಘಟ್ಟಗಳಲ್ಲಿ ಹೊಸ ಸಸ್ಯ ಪ್ರಭೇದಗಳು ಪತ್ತೆ | ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳು
November 10, 2025
7:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror