ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ. ಮಳೆಗಾಲ ಬಂದರೆ ಸಾಕು ತೋಟಕ್ಕೆ ಗಾಡಿ ಅಂದರೆ ಟ್ರಾಕ್ಟರ್ ಹೋಗಲು ಸಾಧ್ಯವಿಲ್ಲದೆ ಸಂಕಟ ಪಡಬೇಕಾಗುತ್ತದೆ. ಈಗ ಈ ಎಲ್ಲಾ ಸಮಸ್ಯೆಗಳಿಗೂ ರಾಜ್ಯ ಸರ್ಕಾರವೂ ಹೊಸ ಯೋಜನೆಯನ್ನು ಜಾರಿಗೊಳಿಸಿದೆ.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಮತ್ತು ರಾಜ್ಯ ಸರ್ಕಾರ ಅನುದಾನ ಸೇರಿ ನಮ್ಮ ಹೊಲ- ನಮ್ಮ ದಾರಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಮೂಲಕ ಪ್ರತಿ 1 ಕಿ.ಮಿ ರಸ್ತೆ ನಿರ್ಮಾಣಕ್ಕೆ ಸರ್ಕಾರ ಒಟ್ಟು ರೂ 12.50 ಲಕ್ಷ ಖರ್ಚು ಮಾಡಲಾಗುತ್ತದೆ. ಕನಿಷ್ಠ3.75 ಮೀಟರ್ ಆಗಲದ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಇದರಿಂದ ಲಾರಿ, ಟ್ರ್ಯಾಕ್ಟರ್ ಸುಲಭವಾಗಿ ಹೊಲಕ್ಕೆ ಹೋಗಬಹುದು.
ಆದರೆ, ಈ ಯೋಜನೆಯನ್ನು ಆಯಾ ರೈತನ ಜಮೀನಿನಲ್ಲೇ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ದಾರಿಗಾಗಿ ಜಮೀನು ನೀಡುವ ರೈತನಿಗೆ ಸರ್ಕಾರದಿಂದ ಯಾವುದೇ ಹಣ ಸಿಗುವುದಿಲ್ಲ. ಆತ ಸ್ವ ಇಚ್ಛೆಯಿಂದ ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಾಯಿತ ದಾನ ಪತ್ರ ಮೂಲಕ ಜಾಗವನ್ನು ಗ್ರಾಮ ಪಂಚಾಯಿತಿ ಹೆಸರಿಗೆ ಬರೆದುಕೊಡಬೇಕು. ಅರ್ಜಿ ಯನ್ನು ಸಲ್ಲಿಸಲು ಪಂಚಾಯಿತಿಗೆ ಹೋಗಬೇಕು ವಿನಾಃ ಯಾವುದೇ ಆನ್ ಲೈನ್ ನಿಯಮವಿಲ್ಲ. ಈ ಯೋಜನೆಯನ್ನು ಜಾರಿಗೊಳಿಸಲು ನೀವೇ ಸ್ವತಃ ಕ್ಷೇತ್ರದ ಶಾಸಕರನ್ನು ಭೇಟಿ ಮಾಡಬೇಕಾಗುತ್ತದೆ.
ಬೇಕಾಗುವ ದಾಖಲೆಗಳು:
• ರೈತರ ಅರ್ಜಿ
• ಪಹಣಿ
• ಗ್ರಾಮ ನಕ್ಷೆ
• ಆಧಾರ್ ಕಾರ್ಡ್
ಗುಜರಾತ್ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾದಲ್ಲಿ ಪಾನ್ ಬೀಡಾಕ್ಕೆ ಬಳಕೆ ಮಾಡುವ ಅಡಿಕೆ ಬೆಲೆ…
ಕ್ಯಾನ್ಸರ್ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡ ನಂತರವೂ ವರ್ಷಗಳ ಬಳಿಕ ಮತ್ತೆ ರೋಗ ಕಾಣಿಸಿಕೊಳ್ಳುವುದಕ್ಕೆ…
ಪ್ರಕೃತಿಯಲ್ಲಿ ಇರುವ ಡಿಎನ್ಎ, ಪ್ರೋಟೀನ್ಗಳಂತೆ ಪ್ಲಾಸ್ಟಿಕ್ಗಳನ್ನೂ ಕೂಡಾ ನಿಗದಿತ ಅವಧಿಯಲ್ಲಿ ಸ್ವಯಂ ಕರಗುವಂತೆ…
2026ರಲ್ಲಿ ಕೃಷಿ ಕ್ಷೇತ್ರ ಸ್ಥಿರಗೊಳ್ಳುವ ನಿರೀಕ್ಷೆಯಿದ್ದರೂ, ವಿವಿಧ ಬೆಳೆಗಳ ನಡುವೆ ಅಸಮಾನ ಸ್ಥಿತಿಗಳು…
ವಿಶ್ವಾದ್ಯಂತ ಶಾಖದ ಅಲೆಗಳು ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)…
ಗ್ರಾಮೀಣ ವಿದ್ಯುದ್ದೀಕರಣವನ್ನು ಬಲಪಡಿಸಲು ಮತ್ತು ಸಾರ್ವಜನಿಕ ಉಪಯುಕ್ತತೆ ಮೂಲಸೌಕರ್ಯಕ್ಕಾಗಿ ಭೂಮಿಯನ್ನು ಬಳಸಿದ ರೈತರಿಗೆ…