ಹಮಾಸ್ ಉಗ್ರರ ದಾಳಿಗೆ ತತ್ತರಿಸಿರುವ ಇಸ್ರೇಲ್ ನಲ್ಲಿ 12 ಸಾವಿರಕ್ಕೂ ಅಧಿಕ ಮಂದಿ ಕರ್ನಾಟಕದ ಕರಾವಳಿಯವರಿದ್ದಾರೆ. ಕೇರಳದ ಗಡಿನಾಡು ಮಂಜೇಶ್ವರದಿಂದ ತೊಡಗಿ ಗೋವಾದ ಕಾರವಾರ ಗಡಿವರೆಗಿನ ಮಂದಿ ಇಸ್ರೇಲ್‌ನಲ್ಲಿ ಕೇರ್ ಗೀವರ್ಸ್ ಕೆಲಸ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಯುದ್ಧಭೂಮಿ ಜೆರುಸಲೇಂನ ಅಕ್ಕಪಕ್ಕ ಇದ್ದರೂ ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ.
ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರr ಬರೆದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್#NalinKumarKateel ಹೇಳಿಕೆ ನೀಡಿದ್ದಾರೆ. ಇಸ್ರೇಲ್‌ಗೆ ತೆರಳಿದ ಕರಾವಳಿ ಮಂದಿಯಲ್ಲಿ ಶೇಕಡ50ರಷ್ಟು ಮಹಿಳೆಯರೇ ಇದ್ದಾರೆ. ಅದರಲ್ಲೂ ಹೆಚ್ಚಿನವರು ಕ್ರಿಶ್ಚಿಯನ್ನರು. ಸಣ್ಣ ಪ್ರಮಾಣದಲ್ಲಿ ಹಿಂದುಗಳಿದ್ದಾರೆ. ದ.ಕ. ಜಿಲ್ಲೆಯ 8 ಅಧಿಕ ಮಂದಿ ಇದರಲ್ಲಿ ಸೇರಿದ್ದಾರೆ. ಕನ್ನಡಿಗರು ಇಸ್ರೇಲ್‌ನಲ್ಲಿ ಯುದ್ಧಪೀಡಿತ ಪ್ರದೇಶದ ಸನಿಹ ಅಪಾಯವನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಿದ್ದಾರೆ ಇಸ್ರೇಲ್‌ನ ಜೆರುಸಲೇಂ, ಅವೀವ್ ಅರ್ಜೀಲಿಯಂ ಹಾಗೂ ಹೈಫಾ ಈ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಕರಾವಳಿ ಕನ್ನಡಿಗರಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇದನ್ನು ಹೊರತುಪಡಿಸಿ ಇಡೀ ಇಸ್ರೇಲ್‌ನಲ್ಲಿ ಭಾರತೀಯರು ಅಲ್ಲಲ್ಲಿ ಹಂಚಿಹೋಗಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ. ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದರು. ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇದೇ ಪರಿಸ್ಥಿತಿ ಇತ್ತು. ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು. ಈಗಲೂ ನಾನು ರಾಯಭಾರಿ ಕಚೇರಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದರು.