Advertisement
ಪ್ರಮುಖ

#IsraelHamasWar | ಇಸ್ರೇಲ್‌ನಲ್ಲಿ ಸಿಲುಕಿರುವ 5 ಸಾವಿರಕ್ಕೂ ಅಧಿಕ ಕರಾವಳಿಗರು | ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ ಬರೆದ ನಳಿನ್ ಕುಮಾರ್ ಕಟೀಲ್ |

Share

ಹಮಾಸ್ ಉಗ್ರರ ದಾಳಿಗೆ ತತ್ತರಿಸಿರುವ ಇಸ್ರೇಲ್ ನಲ್ಲಿ  12 ಸಾವಿರಕ್ಕೂ ಅಧಿಕ ಮಂದಿ ಕರ್ನಾಟಕದ ಕರಾವಳಿಯವರಿದ್ದಾರೆ. ಕೇರಳದ ಗಡಿನಾಡು ಮಂಜೇಶ್ವರದಿಂದ ತೊಡಗಿ ಗೋವಾದ ಕಾರವಾರ ಗಡಿವರೆಗಿನ ಮಂದಿ ಇಸ್ರೇಲ್‌ನಲ್ಲಿ ಕೇರ್ ಗೀವರ್ಸ್ ಕೆಲಸ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಯುದ್ಧಭೂಮಿ ಜೆರುಸಲೇಂನ ಅಕ್ಕಪಕ್ಕ ಇದ್ದರೂ ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ.

ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರr ಬರೆದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್#NalinKumarKateel ಹೇಳಿಕೆ ನೀಡಿದ್ದಾರೆ. ಇಸ್ರೇಲ್‌ಗೆ ತೆರಳಿದ ಕರಾವಳಿ ಮಂದಿಯಲ್ಲಿ ಶೇಕಡ50ರಷ್ಟು ಮಹಿಳೆಯರೇ ಇದ್ದಾರೆ. ಅದರಲ್ಲೂ ಹೆಚ್ಚಿನವರು ಕ್ರಿಶ್ಚಿಯನ್ನರು. ಸಣ್ಣ ಪ್ರಮಾಣದಲ್ಲಿ ಹಿಂದುಗಳಿದ್ದಾರೆ. ದ.ಕ. ಜಿಲ್ಲೆಯ 8 ಅಧಿಕ ಮಂದಿ ಇದರಲ್ಲಿ ಸೇರಿದ್ದಾರೆ. ಕನ್ನಡಿಗರು ಇಸ್ರೇಲ್‌ನಲ್ಲಿ ಯುದ್ಧಪೀಡಿತ ಪ್ರದೇಶದ ಸನಿಹ ಅಪಾಯವನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಿದ್ದಾರೆ ಇಸ್ರೇಲ್‌ನ ಜೆರುಸಲೇಂ, ಅವೀವ್ ಅರ್ಜೀಲಿಯಂ ಹಾಗೂ ಹೈಫಾ ಈ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಕರಾವಳಿ ಕನ್ನಡಿಗರಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಇದನ್ನು ಹೊರತುಪಡಿಸಿ ಇಡೀ ಇಸ್ರೇಲ್‌ನಲ್ಲಿ ಭಾರತೀಯರು ಅಲ್ಲಲ್ಲಿ ಹಂಚಿಹೋಗಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ. ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದರು. ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇದೇ ಪರಿಸ್ಥಿತಿ ಇತ್ತು. ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು. ಈಗಲೂ ನಾನು ರಾಯಭಾರಿ ಕಚೇರಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

24 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

24 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

24 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago