ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಆಮ್ಲಜನಕ ಕೊರತೆಯ ಭಯ ಯಾವುದೇ ರೋಗಿಗಳಿಗೆ ಅಗತ್ಯವಿಲ್ಲ. ದ ಕ ಜಿಲ್ಲೆಯಲ್ಲಿ 3 ವೈದ್ಯಕೀಯ ಆಮ್ಲಜನಕ ತುಂಬುವ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ.
ಆಮ್ಲಜನಕ ಪೂರೈಕೆ ಘಟಕದಿಂದ ಜಿಲ್ಲೆಗೆ ಲಿಕ್ವಿಡ್ ಆಕ್ಸಿಜನ್ ಪೂರೈಕೆಯಲ್ಲಿ ವಿಳಂಬವಾಗಿರುವುದರಿಂದ, ಆಸ್ಪತ್ರೆಗಳಿಗೆ ಅಗತ್ಯಕ್ಕಿಂತ ಹೆಚ್ಚಿನ ಆಮ್ಲಜನಕ ಸಿಲಿಂಡರ್ ಗಳ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿರುತ್ತದೆ. ಪ್ರಸ್ತುತ ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಗೊಂದಲಕ್ಕೀಡಾಗಿ ಗಾಬರಿಗೊಳ್ಳುವ ಅಗತ್ಯವಿಲ್ಲ. ರೋಗಿಗಳೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel