ದ ಕ ಜಿಲ್ಲೆಯಲ್ಲಿ O2 ಕೊರತೆಯ ಭಯ ಬೇಡ | ಜಿಲ್ಲೆಗೆ ಬಂದಿದೆ ಎರಡು ಕಂಟೈನರ್‌ O2 |

May 5, 2021
9:08 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೋಗಿಗಳಿಗೆ ಪೂರೈಕೆ ಮಾಡಲು ಸಾಕಷ್ಟು ದ್ರವೀಕೃತ ಮೆಡಿಕಲ್ ಆಕ್ಸಿಜನ್(O2) ಪೂರೈಕೆಯಾಗಿದ್ದು , ಸಾರ್ವಜನಿಕರು ಯಾವುದೇ ವದಂತಿಗಳಿಗೆ ಭಯಪಡದೆ ಕೋವಿಡ್-19 ರ ನಿಯಮ ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸುರಕ್ಷಿತವಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement

ಕೋವಿಡ್ -19 ಸೋಂಕಿನಿಂದ  ಪೀಡಿತರಾಗಿರುವ ರೋಗಿಗಳಿಗೆ ಆಕ್ಸಿಜನಿನ(O2) ಕೊರತೆ ಇರುವುದನ್ನು ಗಮನಿಸಿ, ಆಕ್ಸಿಜನ್ ನಮ್ಮ ಸೂಕ್ತ ಸಮಯದಲ್ಲಿ ಅವಶ್ಯವಿರುವವರಿಗೆ ಒದಗಿಸಲು ಕ್ರಮಕೈಗೊಂಡಿದ್ದು, ಅದರಂತೆ ಬಹ್ರೈನ್ ನಿಂದ 2 ಕಂಟೈನರ್ ಗಳಲ್ಲಿ  ತಲಾ 30 ಟನ್‍ಗಳ  ದ್ರವೀಕೃತ ಮೆಡಿಕಲ್ ಆಕ್ಸಿಜನ್ ಅನ್ನು  ಬಹ್ರೈನ್ ನ ಮನಾಮಾ ಬಂದರಿನಿಂದ ಹೊರಟಿರುವ ನೌಕಾ ಪಡೆಯ ಐ.ಎನ್.ಎಸ್. ತಲ್ವಾರ್ ಹಡಗು  ನವ ಮಂಗಳೂರು ಬಂದರನ್ನು ತಲುಪಿದೆ.

Advertisement

ಆಕ್ಸಿಜನ್ ಕಂಟೇನರ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ವೈ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ  ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಕುಮಾರ್ ಇವರುಗಳ ಉಪಸ್ಥಿತಿಯಲ್ಲಿ ಇಂಡಿಯಾನ್ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಸ್.ವಿ ಪ್ರಭಾಕರ್ ಶರ್ಮ ಇವರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುತ್ತಾರೆ.

ಈ 2 ಆಕ್ಸಿಜನ್ ಕಂಟೇನರ್ ಗಳನ್ನು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ದೆಹಲಿ ಹಾಗೂ ಇಂಡಿಯನ್ ಆಯಿಲ್ ಕಾರ್ಪೋರೇಷನ್ ರವರ ಸಹಯೋಗದೊಂದಿಗೆ ಒಪರೇಷನ್ ಸಮುದ್ರ ಸೇತು-2 ರ ಅಡಿ ಸಂಯೋಜಿಸಿ ನವ ಮಂಗಳೂರು ಬಂದರಿಗೆ ತರಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದ ಗ್ರಾಮ ಪಂಚಾಯತ್‌ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ʼದರ್ಶಿನಿʼ ವಿನೂತನ ಕಾರ್ಯಕ್ರಮಕ್ಕೆ  ಸರ್ಕಾರ ಚಾಲನೆ
February 7, 2025
7:21 AM
by: The Rural Mirror ಸುದ್ದಿಜಾಲ
‘ಜಲಾನಯನ ಯಾತ್ರೆ’ ಕುರುಡು ಮಲೆಯಲ್ಲಿ ಆರಂಭ
February 7, 2025
7:15 AM
by: The Rural Mirror ಸುದ್ದಿಜಾಲ
ದೇಶದ 25 ಸಾವಿರ ಗ್ರಾಮಗಳಲ್ಲಿ ಸಂಪರ್ಕ ಕಲ್ಪಿಸುವ ಕ್ರಮ  | 900 ಕ್ಕೂ ಅಧಿಕ ಗ್ರಾಮಗಳಲ್ಲಿ ಮೊಬೈಲ್‌ ಟವರ್‌ ಅಳವಡಿಕೆ |
February 7, 2025
7:10 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror