ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೋಗಿಗಳಿಗೆ ಪೂರೈಕೆ ಮಾಡಲು ಸಾಕಷ್ಟು ದ್ರವೀಕೃತ ಮೆಡಿಕಲ್ ಆಕ್ಸಿಜನ್(O2) ಪೂರೈಕೆಯಾಗಿದ್ದು , ಸಾರ್ವಜನಿಕರು ಯಾವುದೇ ವದಂತಿಗಳಿಗೆ ಭಯಪಡದೆ ಕೋವಿಡ್-19 ರ ನಿಯಮ ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸುರಕ್ಷಿತವಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೋವಿಡ್ -19 ಸೋಂಕಿನಿಂದ ಪೀಡಿತರಾಗಿರುವ ರೋಗಿಗಳಿಗೆ ಆಕ್ಸಿಜನಿನ(O2) ಕೊರತೆ ಇರುವುದನ್ನು ಗಮನಿಸಿ, ಆಕ್ಸಿಜನ್ ನಮ್ಮ ಸೂಕ್ತ ಸಮಯದಲ್ಲಿ ಅವಶ್ಯವಿರುವವರಿಗೆ ಒದಗಿಸಲು ಕ್ರಮಕೈಗೊಂಡಿದ್ದು, ಅದರಂತೆ ಬಹ್ರೈನ್ ನಿಂದ 2 ಕಂಟೈನರ್ ಗಳಲ್ಲಿ ತಲಾ 30 ಟನ್‍ಗಳ ದ್ರವೀಕೃತ ಮೆಡಿಕಲ್ ಆಕ್ಸಿಜನ್ ಅನ್ನು ಬಹ್ರೈನ್ ನ ಮನಾಮಾ ಬಂದರಿನಿಂದ ಹೊರಟಿರುವ ನೌಕಾ ಪಡೆಯ ಐ.ಎನ್.ಎಸ್. ತಲ್ವಾರ್ ಹಡಗು ನವ ಮಂಗಳೂರು ಬಂದರನ್ನು ತಲುಪಿದೆ.
ಆಕ್ಸಿಜನ್ ಕಂಟೇನರ್ ಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ವೈ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಕುಮಾರ್ ಇವರುಗಳ ಉಪಸ್ಥಿತಿಯಲ್ಲಿ ಇಂಡಿಯಾನ್ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಸ್.ವಿ ಪ್ರಭಾಕರ್ ಶರ್ಮ ಇವರು ಜಿಲ್ಲಾಡಳಿತಕ್ಕೆ ಹಸ್ತಾಂತರಿಸುತ್ತಾರೆ.
ಈ 2 ಆಕ್ಸಿಜನ್ ಕಂಟೇನರ್ ಗಳನ್ನು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ದೆಹಲಿ ಹಾಗೂ ಇಂಡಿಯನ್ ಆಯಿಲ್ ಕಾರ್ಪೋರೇಷನ್ ರವರ ಸಹಯೋಗದೊಂದಿಗೆ ಒಪರೇಷನ್ ಸಮುದ್ರ ಸೇತು-2 ರ ಅಡಿ ಸಂಯೋಜಿಸಿ ನವ ಮಂಗಳೂರು ಬಂದರಿಗೆ ತರಲಾಗಿದೆ.
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…