#FarmersRights | ಭತ್ತದ ತಳಿ ತಪಸ್ವಿಗೆ ರಾಷ್ಟ್ರಪತಿಗಳಿಂದ ಗೌರವ | ಬೆಳ್ತಂಗಡಿಯ ಕೃಷಿ ಸಾಧಕ ಅಮೈ ದೇವರಾವ್‌ ಅವರಿಗೆ ಪುರಸ್ಕಾರ |

September 12, 2023
8:39 PM
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೃಷಿಕ, ಭತ್ತದ ಕೃಷಿಯಲ್ಲಿ ತಳಿ ತಪಸ್ವಿ ಎಂದು ಹೆಸರುವಾಸಿಯಾಗಿರುವ ಅಮೈ ದೇವರಾವ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುರಸ್ಕರಿಸಿದರು.

ICAR (ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್)  ಆಯೋಜಿಸಿದ ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಕೃಷಿಕ, ಭತ್ತದ ಕೃಷಿಯಲ್ಲಿ ತಳಿ ತಪಸ್ವಿ ಎಂದು ಹೆಸರುವಾಸಿಯಾಗಿರುವ ಅಮೈ ದೇವರಾವ್ ಅವರನ್ನು ಪುರಸ್ಕರಿಸಲಾಯಿತು.

ರೈತರ ಹಕ್ಕುಗಳ ಕುರಿತ ಮೊದಲ ಜಾಗತಿಕ ವಿಚಾರ ಸಂಕಿರಣ  ದೆಹಲಿಯಲ್ಲಿ  ಆರಂಭಗೊಂಡಿದೆ. ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಕೃಷಿಯಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಅಮೈ ದೇವರಾಯರು ತಮ್ಮ ಐದು ಎಕರೆ ಗದ್ದೆಯಲ್ಲಿ 175ಕ್ಕೂ ಅಧಿಕ ಭತ್ತದ  ತಳಿಗಳನ್ನು ಬೆಳೆದಿದ್ದಾರೆ. ಒಂದೇ ಗದ್ದೆಯಲ್ಲಿ ಅನೇಕ ಬಗೆಯ ತಳಿಗಳನ್ನು ನಾಟಿ ಮಾಡುವ ದೇವರಾವ್  ಅವರು ತಳಿ ತಪಸ್ವಿ ಎಂಬ ಬಿರುದಿಗೆ ಪಾತ್ರರಾಗಿದ್ದಾರೆ. 1988 ರಿಂದ ರಾಸಾಯನಿಕ ಬಳಕೆಗೆ ಸಂಪೂರ್ಣ ವಿದಾಯ ಹೇಳಿದ್ದಾರೆ. ಸಾವಯವ ಗೊಬ್ಬರನ್ನು ಬಳಸುವ ಇವರು ಭತ್ತವನ್ನು ಮನೆಯಲ್ಲಿಯೇ ಒಣಗಿಸಿ  ಅಕ್ಕಿ ಮಾಡುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror