Advertisement
ಸುದ್ದಿಗಳು

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

Share

2026-27ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಭತ್ತದ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ರೈತರು ಆಗಸ್ಟ್‌ 14 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.

ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೋಜನೆ ಅನುಷ್ಠಾನಕ್ಕಾಗಿ ಇಂಡಸ್ ಇಂಡ್ ಜನರಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್‌ (ರಿಲಯನ್ಸ್ ಜನರಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್‌) ಅನ್ನು ವಿಮಾ ಸಂಸ್ಥೆಯಾಗಿ ನೇಮಕ ಮಾಡಲಾಗಿದೆ.

ಭತ್ತದ ಬೆಳೆಗೆ ಪ್ರತಿ ಎಕರೆಗೆ ₹611.91 (ರೈತರ ಪಾಲು ಶೇ.2) ವಿಮಾ ಕಂತು ನಿಗದಿಯಾಗಿದ್ದು, ಒಟ್ಟು ವಿಮಾ ಮೊತ್ತ ₹30,595.32 ಆಗಿರುತ್ತದೆ. ರೈತರು ನಿಗದಿತ ಅವಧಿಯೊಳಗೆ ಹತ್ತಿರದ ಬ್ಯಾಂಕ್‌ಗಳಲ್ಲಿ ಅಥವಾ ಅಧಿಕೃತ ನೋಂದಣಿ ಕೇಂದ್ರಗಳಲ್ಲಿ ವಿಮಾ ಕಂತು ಪಾವತಿಸಿ ನೋಂದಣಿ ಮಾಡಿಸಬಹುದು.

ಯೋಜನೆಯಡಿ ಅಧಿಸೂಚಿತ ಪ್ರದೇಶಗಳಲ್ಲಿ ಪ್ರಕೃತಿ ವಿಕೋಪ ಅಥವಾ ಹವಾಮಾನ ವೈಪರೀತ್ಯದಿಂದಾಗಿ ಶೇ.75ಕ್ಕಿಂತ ಹೆಚ್ಚು ಬಿತ್ತನೆ ವಿಫಲವಾದರೆ, ಬೆಳೆಯ ಬೆಳವಣಿಗೆಯ ಅವಧಿಯಲ್ಲಿ ಶೇ.50ಕ್ಕಿಂತ ಹೆಚ್ಚು ನಷ್ಟ ಉಂಟಾದರೆ, ಕಟಾವಿನ ನಂತರ ಎರಡು ವಾರಗಳೊಳಗೆ ಅಕಾಲಿಕ ಮಳೆ ಅಥವಾ ಚಂಡಮಾರುತದಿಂದ ಬೆಳೆಗೆ ಹಾನಿಯಾದರೆ ಹಾಗೂ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆ ಮೊದಲಾದ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಿಂದ ಉಂಟಾಗುವ ನಷ್ಟಕ್ಕೂ ಯೋಜನೆ ಅನ್ವಯ ಪರಿಹಾರ ದೊರೆಯಲಿದೆ.

ಅಗತ್ಯ ದಾಖಲೆಗಳು

  • ಆಧಾರ್ ಕಾರ್ಡ್
  • ಆರ್‌ಟಿಸಿ / ಪಹಣಿ
  • ಬ್ಯಾಂಕ್ ಪಾಸ್‌ಬುಕ್
  • ಬೆಳೆ ಬಿತ್ತನೆ ದೃಢೀಕರಣ ಪತ್ರ
  • ಸ್ವಯಂ ಘೋಷಣಾ ಪತ್ರ (ಸಾಲ ಪಡೆಯದ ರೈತರಿಗೆ ಕಡ್ಡಾಯ)

ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದಲ್ಲಿ, ಕೊನೆಯ ದಿನಾಂಕಕ್ಕಿಂತ ಕನಿಷ್ಠ ಒಂದು ವಾರ ಮೊದಲು ಬ್ಯಾಂಕ್ ವ್ಯವಸ್ಥಾಪಕರಿಗೆ ಲಿಖಿತವಾಗಿ ತಿಳಿಸಿ ಯೋಜನೆಯಿಂದ ಹೊರಗುಳಿಯಬಹುದು.

ರೈತರು ಗ್ರಾಮ ಒನ್, ಕರ್ನಾಟಕ ಒನ್, ರೈತ ಸಂಪರ್ಕ ಕೇಂದ್ರಗಳು ಅಥವಾ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಶಾಖೆಗಳ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Farmers in Dakshina Kannada can register for the Karnataka Raitha Suraksha Pradhan Mantri Fasal Bima Yojana for the 2026-27 Kharif season until August 14, 2026. Paddy growers can insure their crop by paying a farmer premium of ₹611.91 per acre, with coverage of ₹30,595.32 per acre against sowing failure, mid-season crop loss, post-harvest damage, and localized natural calamities.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

6 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

6 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

17 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

22 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

23 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

23 hours ago