ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ್ ನಿಧನ

February 5, 2022
2:33 PM

ಖ್ಯಾತ ಸೂಫಿ ಸಂತ, ಸರ್ವ ಧರ್ಮ ಸಮನ್ವಯಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಎನ್ ಸುತಾರ ಅವರು ಇಂದು ಮುಂಜಾನೆ ಹೃದಯಘಾತದಿಂದ ನಿಧನರಾಗಿದ್ದಾರೆ.

Advertisement
Advertisement
Advertisement
Advertisement

ಇವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಕೋಮು ದ್ವೇಷ, ಜಾತಿ- ಧರ್ಮದ ಅಮಲು ಮಾನವತೆಯನ್ನು ಮಂಕಾಗಿಸಿರುವ ವಿಪ್ಲವದ ಈ ದಿನಗಳಲ್ಲಿ ಜನಸಾಮಾನ್ಯರ ನಡುವಿದ್ದ ಈ ಕಬೀರ ದಿಢೀರನೆ ಕಣ್ಮರೆಯಾಗಿದ್ದಾರೆ.

Advertisement

ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್ ಹಾಗೂ ಅಮೀನಾಬಿ ದಂಪತಿ ಪುತ್ರರಾದ ಇಬ್ರಾಹಿಂ ಸುತಾರ 1940 ರ ಮೇ 10 ರಂದು ಜನಿಸಿದರು. ಇವರಿಗೆ ಮನೆಯಲ್ಲಿನ ಬಡತನದ ಪರಿಸ್ಥಿತಿ ಓದಲು ಉತ್ತೇಜಕವಾಗಿರಲಿಲ್ಲ. ಮೂರನೇ ತರಗತಿ ಶಿಕ್ಷಣ ಅಪೂರ್ಣಗೊಂಡಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಯನ್ನೇ ಸುತಾರ ಕಲತರು. ಬದುಕಿಗೆ ಅದೇ ದಾರಿಯನ್ನಾಗಿಸಿತು.

ವೈದಿಕ ವಚನ ಮತ್ತು ಸೂಫಿ ಪರಂಪರೆಗಳ ಕುರಿತು ಭಜನೆ, ಪ್ರವಚನ, ಸಂವಾದಗಳ ಮೂಲಕ ಜನರಲ್ಲಿ ಭಾವೈಕ್ಯತೆ ಉಂಟು ಮಾಡುತ್ತಿದ್ದ ತತ್ವಪದಕಾರರು ಮತ್ತು ಪ್ರವಚನಕಾರರಾಗಿದ್ದರು. 2018ರಲ್ಲಿ ಇವರಿಗೆ ಭಾರತ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಥೆನಾಲ್ ಮಿಶ್ರಣ ಶೇ.20ಕ್ಕೆ ಹೆಚ್ಚಿಸುವ ಚಿಂತನೆ |
March 1, 2025
7:36 AM
by: ದ ರೂರಲ್ ಮಿರರ್.ಕಾಂ
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |
March 1, 2025
7:30 AM
by: The Rural Mirror ಸುದ್ದಿಜಾಲ
ರೈತ ಉತ್ಪಾದಕ ಸಂಸ್ಥೆಗಳ ಮೇಳ | ರೈತ ಉತ್ಪಾದಕ ಸಂಸ್ಥೆಗಳಿಂದ ಕೃಷಿ ಕ್ಷೇತ್ರದ ಏಳಿಗೆಗೆ ಕೊಡುಗೆ
March 1, 2025
7:22 AM
by: The Rural Mirror ಸುದ್ದಿಜಾಲ
ಕರಾವಳಿ ಭಾಗದಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ | ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚನೆ
March 1, 2025
7:13 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror