ಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ | ಹೊಸ ತಲೆಮಾರಿಗೆ ಗತಿಸಿದ ಸಾಧಕರನ್ನು ಪರಿಚಯಿಸಬೇಕು –  ನಾ. ಕಾರಂತ ಪೆರಾಜೆ

July 11, 2024
9:40 PM
ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ, ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದುವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ ಮಂದಿ ಅಂತಹ ಹಿರಿಯರನ್ನು ಜ್ಞಾಪಿಸಿ, ಹೊಸ ತಲೆಮಾರಿಗೆ ಪರಿಚಯಿಸುವುದು ಕಲೆಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಬದ್ಧತೆಯಲ್ಲಿ ಮಾಡಬೇಕಾದ ಕಾಯಕವಾಗಿದೆ.” ಎಂದು ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ಹೇಳಿದರು.
ಅವರು ಪುತ್ತೂರು ಸನಿಹದ ದೊಡ್ಡಡ್ಕದ ಪಾಲೆಚ್ಚಾರು ಗೋವಿಂದ ನಾಯಕರ ‘ಶಿವಕೃಪಾ ನಿವಾಸ’ದಲ್ಲಿ ಜರುಗಿದ ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕದ ಹತ್ತಿರವಾದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ” ಎಂದರು.
ಯಕ್ಷಗಾನ ಹಿಮ್ಮೇಳದ ಭಾಷಾವಿದ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅರ್ಥಧಾರಿ, ವೇಷಧಾರಿ ಗುಂಡ್ಯಡ್ಕ ಈಶ್ವರ ಭಟ್ ಜತೆಯಾಗಿ ಸಮಾರಂಭವನ್ನು ದೀಪಜ್ವಲನದ ಮೂಲಕ ಉದ್ಘಾಟಿಸಿದರು. ತಿಮ್ಮಯ್ಯ ಆಚಾರ್ ಅವರ ಚಿರಂಜೀವಿ ಕೃಷ್ಣಯ್ಯ ಆಚಾರ್ ಉಪಸ್ಥಿತರಿದ್ದರು. ಗೋವಿಂದ ನಾಯಕ್ ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು. ದುರ್ಗಾಪ್ರಸಾದ್, ಗಣಪತಿ ನಾಯಕ್  ಅತಿಥಿಗಳನ್ನು ಗೌರವಿಸಿದರು.
ಪೂರ್ವಾಹ್ನ ದೇವತಾರಾಧನೆಯ ಜತೆಗೆ ಬಾಲ ಕಲಾವಿದರಿಂದ ಸಂಗೀತ, ಸ್ಮೃತಿ ಕಲಾಪದ ಕೊನೆಗೆ ‘ಶ್ರೀಕೃಷ್ಣ ರಾಯಭಾರ, ಸುಧನ್ವ ಮೋಕ್ಷ’ ಪ್ರಸಂಗಗಳ ತಾಳಮದ್ದಳೆಗಳು ಜರುಗಿದ್ದುವು. ಕಲಾವಿದರಾಗಿ – ಪಾಲೆಚ್ಚಾರು ಗೋವಿಂದ ನಾಯಕ್, ಶ್ರೀಪತಿ ನಾಯಕ್ ಆಜೇರು,  ಅಮೃತಾ ಅಡಿಗ (ಭಾಗವತರು), ಪದ್ಯಾಣ ಶಂಕರನಾರಾಯಣ ಭಟ್, ಮುರಾರಿ ಕಡಂಬಳಿತ್ತಾಯ, ಕೌಶಿಕ್ ರಾವ್ ಪುತ್ತಿಗೆ, ಕೃಷ್ಣಪ್ರಕಾಶ ಉಳಿತ್ತಾಯ, ಪಿ.ಜಿ.ಜಗನ್ನಿವಾಸ ರಾವ್, ಮುರಳೀಧರ ಕಲ್ಲೂರಾಯ, ಕೃಷ್ಣಯ್ಯ ಆಚಾರ್, ಸತ್ಯನಾರಾಯಣ ಅಡಿಗ (ಚೆಂಡೆ, ಮದ್ದಳೆ), ಪಕಳಕುಂಜ ಶ್ಯಾಮ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾ. ಕಾರಂತ ಪೆರಾಜೆ, ಗುಡ್ಡಪ್ಪ ಬಲ್ಯ, ಭಾಸ್ಕರ ಶೆಟ್ಟಿ ಸಾಲ್ಮರ, ಕೇಶವ ಭಟ್ ಕೇಕಣಾಜೆ, ಅಶೋಕ ಸುಬ್ರಹ್ಮಣ್ಯ ಭಟ್ ಪೆರುವಡಿ, ಸಚ್ಚಿದಾನಂದ ಪ್ರಭು (ಅರ್ಥದಾರಿಗಳು) ಭಾಗವಹಿಸಿದ್ದರು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror