ಕಲೆ-ಸಂಸ್ಕೃತಿ

ಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ | ಹೊಸ ತಲೆಮಾರಿಗೆ ಗತಿಸಿದ ಸಾಧಕರನ್ನು ಪರಿಚಯಿಸಬೇಕು –  ನಾ. ಕಾರಂತ ಪೆರಾಜೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಒಂದೊಂದು ಕಾಲಘಟ್ಟದಲ್ಲಿ ಯಕ್ಷಗಾನವನ್ನು ಮನಸಾ ಆರಾಧಿಸಿ, ಅದನ್ನು ಜನಮಾನಸದಲ್ಲಿ ಹಬ್ಬಿಸಿದ ಅನೇಕರು ಗತಿಸಿದ್ದಾರೆ. ಅವರ ಕೊಡುಗೆಗಳು ದಾಖಲಾಗಲಿಲ್ಲ. ದಾಖಲು ಮಾಡಬೇಕಾದ ಸಂಪನ್ಮೂಲಗಳು ವಿರಳವಾಗಿದ್ದುವು. ಅವರ ಸಾಂಗತ್ಯದಲ್ಲಿದ್ದ ಬೆರಳೆಣಿಕೆಯ ಮಂದಿ ಅಂತಹ ಹಿರಿಯರನ್ನು ಜ್ಞಾಪಿಸಿ, ಹೊಸ ತಲೆಮಾರಿಗೆ ಪರಿಚಯಿಸುವುದು ಕಲೆಯ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಬದ್ಧತೆಯಲ್ಲಿ ಮಾಡಬೇಕಾದ ಕಾಯಕವಾಗಿದೆ.” ಎಂದು ಕಲಾವಿದ, ಲೇಖಕ ನಾ. ಕಾರಂತ ಪೆರಾಜೆ ಹೇಳಿದರು.
ಅವರು ಪುತ್ತೂರು ಸನಿಹದ ದೊಡ್ಡಡ್ಕದ ಪಾಲೆಚ್ಚಾರು ಗೋವಿಂದ ನಾಯಕರ ‘ಶಿವಕೃಪಾ ನಿವಾಸ’ದಲ್ಲಿ ಜರುಗಿದ ಕೀರ್ತಿಶೇಷ ಮದ್ದಲೆಗಾರ ಪಡುಕಾನ ತಿಮ್ಮಯ್ಯ ಆಚಾರ್ ಅವರ ಸ್ಮೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಪಡುಕಾನ ತಿಮ್ಮಯ್ಯರು ಗತಿಸಿ ನಾಲ್ಕು ದಶಕದ ಹತ್ತಿರವಾದರೂ ಅವರನ್ನು ಸ್ಮರಿಸಿ ಗೌರವಿಸುವ ಮೂಲಕ ಅವರ ಶಿಷ್ಯ ಗೋವಿಂದ ನಾಯಕರು ನಿಜಾರ್ಥದ ಗುರುವಂದನೆಯನ್ನು ಸಲ್ಲಿಸಿದ್ದಾರೆ” ಎಂದರು.
ಯಕ್ಷಗಾನ ಹಿಮ್ಮೇಳದ ಭಾಷಾವಿದ ಪದ್ಯಾಣ ಶಂಕರನಾರಾಯಣ ಭಟ್ ಹಾಗೂ ಅರ್ಥಧಾರಿ, ವೇಷಧಾರಿ ಗುಂಡ್ಯಡ್ಕ ಈಶ್ವರ ಭಟ್ ಜತೆಯಾಗಿ ಸಮಾರಂಭವನ್ನು ದೀಪಜ್ವಲನದ ಮೂಲಕ ಉದ್ಘಾಟಿಸಿದರು. ತಿಮ್ಮಯ್ಯ ಆಚಾರ್ ಅವರ ಚಿರಂಜೀವಿ ಕೃಷ್ಣಯ್ಯ ಆಚಾರ್ ಉಪಸ್ಥಿತರಿದ್ದರು. ಗೋವಿಂದ ನಾಯಕ್ ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು. ದುರ್ಗಾಪ್ರಸಾದ್, ಗಣಪತಿ ನಾಯಕ್  ಅತಿಥಿಗಳನ್ನು ಗೌರವಿಸಿದರು.
ಪೂರ್ವಾಹ್ನ ದೇವತಾರಾಧನೆಯ ಜತೆಗೆ ಬಾಲ ಕಲಾವಿದರಿಂದ ಸಂಗೀತ, ಸ್ಮೃತಿ ಕಲಾಪದ ಕೊನೆಗೆ ‘ಶ್ರೀಕೃಷ್ಣ ರಾಯಭಾರ, ಸುಧನ್ವ ಮೋಕ್ಷ’ ಪ್ರಸಂಗಗಳ ತಾಳಮದ್ದಳೆಗಳು ಜರುಗಿದ್ದುವು. ಕಲಾವಿದರಾಗಿ – ಪಾಲೆಚ್ಚಾರು ಗೋವಿಂದ ನಾಯಕ್, ಶ್ರೀಪತಿ ನಾಯಕ್ ಆಜೇರು,  ಅಮೃತಾ ಅಡಿಗ (ಭಾಗವತರು), ಪದ್ಯಾಣ ಶಂಕರನಾರಾಯಣ ಭಟ್, ಮುರಾರಿ ಕಡಂಬಳಿತ್ತಾಯ, ಕೌಶಿಕ್ ರಾವ್ ಪುತ್ತಿಗೆ, ಕೃಷ್ಣಪ್ರಕಾಶ ಉಳಿತ್ತಾಯ, ಪಿ.ಜಿ.ಜಗನ್ನಿವಾಸ ರಾವ್, ಮುರಳೀಧರ ಕಲ್ಲೂರಾಯ, ಕೃಷ್ಣಯ್ಯ ಆಚಾರ್, ಸತ್ಯನಾರಾಯಣ ಅಡಿಗ (ಚೆಂಡೆ, ಮದ್ದಳೆ), ಪಕಳಕುಂಜ ಶ್ಯಾಮ ಭಟ್, ಗುಂಡ್ಯಡ್ಕ ಈಶ್ವರ ಭಟ್, ನಾ. ಕಾರಂತ ಪೆರಾಜೆ, ಗುಡ್ಡಪ್ಪ ಬಲ್ಯ, ಭಾಸ್ಕರ ಶೆಟ್ಟಿ ಸಾಲ್ಮರ, ಕೇಶವ ಭಟ್ ಕೇಕಣಾಜೆ, ಅಶೋಕ ಸುಬ್ರಹ್ಮಣ್ಯ ಭಟ್ ಪೆರುವಡಿ, ಸಚ್ಚಿದಾನಂದ ಪ್ರಭು (ಅರ್ಥದಾರಿಗಳು) ಭಾಗವಹಿಸಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಪ್ಪಾಯಿ ಕೃಷಿ ಕಲಿಸಿದ ಪಾಠ

https://www.youtube.com/watch?v=GSG6_RAqSJ0&t=70s

3 hours ago

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ…

3 hours ago

ರಾಜ್ಯದಲ್ಲಿ ಹಾಲಿನ ಬೆಲೆ ಏರಿಕೆ | ಯುಗಾದಿಗೆ ರೈತರಿಗೆ ಕೊಡುಗೆ |

ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಿರುವ ಸರ್ಕಾರದ ನಿರ್ಧಾರವನ್ನ ಮೈಮುಲ್ ಅಧ್ಯಕ್ಷ…

5 hours ago

‘ಪರಿಸರ-2025’ ರಾಷ್ಟ್ರೀಯ ಸಮ್ಮೇಳನ | ಉಸಿರಾಡುವ  ಗಾಳಿ , ಕುಡಿಯುವ ನೀರು ,  ಪಕ್ಷಿಗಳ ಕೂಗಿನ ಬಗ್ಗೆ ಯೋಚಿಸುವ ಅಗತ್ಯವಿದೆ

ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸುವ  ಬಗ್ಗೆ ಚಿಂತಿಸುವ ಪೋಷಕರು ಅವರು ಭವಿಷ್ಯದಲ್ಲಿ ಉಸಿರಾಡುವ …

5 hours ago

ಹಾಲಿನ ದರ ನೇರವಾಗಿ ರೈತರಿಗೆ ನೀಡಲು ನಿರ್ಧಾರ

ಎಪ್ರಿಲ್ 1 ರಿಂದ  ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಈ…

5 hours ago