Advertisement
ಸುದ್ದಿಗಳು

ಪದ್ಯಾಣ ಪ್ರಶಸ್ತಿಗೆ ಭಾಗವತದ್ವಯರು ಆಯ್ಕೆ | ದಿನೇಶ ಅಮ್ಮಣ್ಣಾಯ, ಪುತ್ತಿಗೆ ರಘುರಾಮ ಹೊಳ್ಳರಿಗೆ ಪ್ರಶಸ್ತಿ | ಅಕ್ಟೋಬರ್ 23ರಂದು ಪ್ರಶಸ್ತಿ ಪ್ರದಾನ |

Share

ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತರಾದ  ದಿನೇಶ ಅಮ್ಮಣ್ಣಾಯ ಹಾಗೂ  ಪುತ್ತಿಗೆ ರಘುರಾಮ ಹೊಳ್ಳರು ‘ಪದ್ಯಾಣ ಪ್ರಶಸ್ತಿ’ಗೆ ಆಯ್ಕೆಗೊಂಡಿದ್ದಾರೆ. ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಕ್ಟೋಬರ್ 23, ರವಿವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಶ್ರೀ ನಟರಾಜ’ ವೇದಿಕೆಯಲ್ಲಿ ನಡೆಯುವ ಪದ್ಯಾಣ ಸ್ಮೃ ತಿ ‘ಗಾನ ಗಣಪತಿ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭಾಗವಹಿಸುವರು.

ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಅಧ್ಯಕ್ಷ, ಕಲಾಪೋಷಕ ಡಾ.ಟಿ.ಶ್ಯಾಮ್ ಭಟ್ ಅವರ ಅಧ್ಯಕ್ಷತೆಯಲ್ಲಿ ಸಮಾರಂಭ ಸಂಪನ್ನವಾಗಲಿದೆ. ಪುತ್ತೂರು ಶಾಸಕ  ಸಂಜೀವ ಮಠಂದೂರು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ  ಕೇಶವ ಪ್ರಸಾದ್ ಮುಳಿಯ ಮುಖ್ಯ ಅತಿಥಿಗಳು. ಪದ್ಯಾಣ ಗಣಪತಿ ಭಟ್ಟರ ಸ್ಮೃತಿಯನ್ನು ಯಕ್ಷ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ ಮಾಡಲಿದ್ದಾರೆ. ಸುಳ್ಯ ಪ್ರತಿಭಾ ವಿದ್ಯಾಲಯದ ಪ್ರಾಚಾರ್ಯ  ವೆಂಕಟರಾಮ ಭಟ್ಟರು ಪ್ರಶಸ್ತಿ ಪುರಸ್ಕೃತರನ್ನು ನುಡಿಹಾರಗಳ ಮೂಲಕ ಅಭಿನಂದಿಸಲಿದ್ದಾರೆ.
ಈ ಸಂದರ್ಭದಲ್ಲಿ ಶ್ರೀ ಹನುಮಗಿರಿ ಮೇಳದ ಭಾಗವತ  ರವಿಚಂದ್ರ ಕನ್ನಡಿಕಟ್ಟೆ ಅವರಿಗೆ ‘ಪದ್ಯಾಣ ಶಿಷ್ಯ ಸಂಮಾನ’ ಹಾಗೂ ಯಕ್ಷಗಾನ ಅರ್ಥದಾರಿ  ರಾಮ ಜೋಯಿಸ್ ಬೆಳ್ಳಾರೆ ಅವರಿಗೆ ‘ಅಭಿಮಾನಿ ಶಿಷ್ಯ ಸಂಮಾನ’ವನ್ನು ನೀಡಲಾಗುತ್ತದೆ. ದಿನಪೂರ್ತಿ ನಡೆಯುವ ಕಲಾಪದಲ್ಲಿ ಯಕ್ಷಗಾನ ವಾದ-ಸಂವಾದ, ಗಾನ ವೈಭವ, ನೃತ್ಯ ವೈಭವ, ಪ್ರದರ್ಶನ.. ಹೀಗೆ ವೈವಿಧ್ಯ ಕಾರ್ಯಹೂರಣ ಸಂಪನ್ನವಾಗಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

4 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

4 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

4 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

4 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

19 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

24 hours ago