Advertisement
MIRROR FOCUS

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

Share

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ ಕನ್ನಡಿಗ ಸೇರಿದಂತೆ 20 ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಭಯೋತ್ಪಾದಕರ ದಾಳಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.  ಕೆಲ ಪ್ರವಾಸಿಗರು ಗಾಯಗೊಂಡಿರುವುದಾಗಿ ವರದಿಯಾಗಿದ್ದು,  ಗಾಯಗೊಂಡವರನ್ನು  ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. …..ಮುಂದೆ ಓದಿ….

ಘಟನೆ  ಸಂಬಂಧ ಪ್ರಧಾನಿ ನರೇಂದ್ರ ಮೋದಿ,   ಕೇಂದ್ರ  ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ  ಮಾತುಕತೆ ನಡೆಸಿದ್ದು,  ಈ ವೇಳೆ ಪ್ರಧಾನಿ  ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ  ನೀಡಿದ್ದಾರೆ ಎಂದು   ತಿಳಿಸಿದ್ದಾರೆ. ಪ್ರವಾಸಿಗರ ಮೇಲೆ  ನಡೆದ ಘಟನೆ ಖಂಡನಾರ್ಹ.  ಕೃತ್ಯದಲ್ಲಿ ಪಾಲ್ಗೊಂಡವರ ವಿರುದ್ಧ ಕಠಿಣ ಕ್ರ ಮ ಕೈಗೊಳ್ಳಲಾಗುವುದು ಎಂದು ಅಮಿತ್‌ ಶಾ ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿ  ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.  ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಗ್ಧ ನಾಗರಿಕರ ಮೇಲೆ ಹಲ್ಲೆ ನಡೆಸಿರುವುದು ಅಮಾನವೀಯ ಎಂದು ಹೇಳಿದ್ದಾರೆ.  ಜಮ್ಮು-ಕಾಶ್ಮೀರದ  ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಗಾಯಾಳುಗಳ ಚಿಕಿತ್ಸೆಗೆ ಸೂಕ್ತ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.  ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ  ಘಟನೆಯನ್ನು ಖಂಡಿಸಿದ್ದಾರೆ.

ಮಂಗಳವಾರ ಮಧ್ಯಾಹ್ನದ ವೇಳೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ವ್ಯಾಲಿಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.  ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರೆ ತೊಯ್ಬಾದ ಸ್ಥಳೀಯ ಬ್ರಾಂಚ್‌ ಆಗಿರುವ ರೆಸಿಸ್ಟೆನ್ಸ್ ಫ್ರಂಟ್ ಹೊತ್ತುಕೊಂಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 day ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

2 days ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

3 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago