ಟ್ಯಾಂಕರ್​​ ಬಿಟ್ಟು ಟ್ರ್ಯಾಕ್ಟರ್​​ ಏರಿದ ಪಾಕ್​​ ಸೈನಿಕರು…! | ಲಕ್ಷಾಂತರ ಎಕರೆ ಜಮೀನಿನಲ್ಲಿ ವ್ಯವಸಾಯಕ್ಕೆ ಇಳಿದ ಸೈನಿಕರು | ಗ್ರಾಮೀಣ ಬಡವರ ಹಕ್ಕು ಕಿತ್ತುಕೊಳ್ಳುತ್ತಿದೆ ಸೇನೆ |

September 28, 2023
3:01 PM
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ 10 ಲಕ್ಷ ಎಕರೆ ಸರ್ಕಾರಿ ಭೂಮಿಯನ್ನು ಸೇನೆ ಸ್ವಾಧೀನಪಡಿಸಿಕೊಳ್ಳಲು ಹೊರಟಿದೆ. ಈ ಮೂಲಕ ಸೇನೆ ದೇಶ ಕಾಯುವ ಜೊತೆಗೆ ಕೃಷಿ ಕ್ಷೇತ್ರಕ್ಕೆ ಕಾಲಿಟ್ಟಿದೆ.

ಪಾಕಿಸ್ತಾನದ ಸ್ಥಿತಿ ಎಲ್ಲಿಗೆ ಬಂತು ನೋಡಿ. ಗನ್‌, ಯುದ್ಧ, ಭಯೋತ್ಪಾಧನೆ, ಇನ್ನೊಂದು ದೇಶದ ಮೇಲೆ ಕಾಲು ಕೆರೆದುಕೊಂಡು ಜಗಲ ಮಾಡೋದನ್ನು ಬಿಟ್ಟು ದೇಶದ ಜನತೆಗೆ ಅನ್ನ ಕೊಡುವ ಕಾಯಕದಲ್ಲಿ ತೊಡಗಲು ಮುಂದಾಗಿದೆ. ಪಾಕಿಸ್ತಾನದ ಆರ್ಥಿಕತೆ ಬಿಕ್ಕಟ್ಟಿಗೆ ಸಿಲುಕಿಗೆ ಯಾವುದೋ ಕಾಲವಾಗಿದೆ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಪಾಕಿಸ್ತಾನ ಆರ್ಥಿಕ ಬಿಕ್ಕಟ್ಟಿನಲ್ಲಿದೆ. ಇದರಿಂದ ಜನರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ದೇಶವನ್ನು ಬಲಪಡಿಸುವ ಸಲುವಾಗಿ, ಪಾಕಿಸ್ತಾನ ಸೇನೆ ಕೃಷಿ ಕ್ಷೇತ್ರವನ್ನು ಪ್ರವೇಶಿಸುತ್ತಿದೆ.

Advertisement
Advertisement
Advertisement
Advertisement

ತಾಜಾ ಬೆಳವಣಿಗೆಯಲ್ಲಿ ಅಕ್ಷರಶಃ ಇಡೀ ದೇಶವನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಪಾಕಿಸ್ತಾನ ಸೇನೆ ನಿರ್ಧರಿಸಿದೆ. ಮಾಧ್ಯಮ ಸಂಸ್ಥೆ ನಿಕ್ಕಿ ಏಷ್ಯಾ ಪ್ರಕಾರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ 10 ಲಕ್ಷ ಎಕರೆ ಸರ್ಕಾರಿ ಭೂಮಿಯನ್ನು ಸೇನೆ ಸ್ವಾಧೀನಪಡಿಸಿಕೊಳ್ಳಲು ಹೊರಟಿದೆ. ಈ ಮೂಲಕ ಸೇನೆ ದೇಶ ಕಾಯುವ ಜೊತೆಗೆ ಕೃಷಿ ಕ್ಷೇತ್ರಕ್ಕೆ (Agriculture) ಕಾಲಿಟ್ಟಿದೆ. ಇಲ್ಲಿ ಗೋಧಿ, ಹತ್ತಿ, ಕಬ್ಬು, ತರಕಾರಿಗಳು ಮತ್ತು ಹಣ್ಣುಗಳನ್ನು ಬೆಳೆಸಲು ಸೇನೆ ನಿರ್ಧರಿಸಿದೆ.

Advertisement

ಇವುಗಳ ಮಾರಾಟದಿಂದ ಬರುವ ಲಾಭದಲ್ಲಿ ಶೇ. 20 ರಷ್ಟು ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಮೀಸಲಿಡಲಾಗಿದೆ. ಉಳಿದ ಹಣವನ್ನು ಸೇನೆ ಮತ್ತು ರಾಜ್ಯ ಸರ್ಕಾರ ಸಮನಾಗಿ ಹಂಚಿಕೊಳ್ಳಲಿದೆ. ಬಡವರಿಗೆ ಆಹಾರ ಭದ್ರತೆ ಒದಗಿಸಲು ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಸೇನೆ ಹೇಳಿಕೊಂಡಿದೆ. ಆದರೆ, ಸೇನೆಯು ಗ್ರಾಮೀಣ ಬಡವರ ಹಕ್ಕುಗಳನ್ನು ಕಿತ್ತುಕೊಳ್ಳುತ್ತಿದೆ ಎಂಬ ಟೀಕೆಗಳಿವೆ. ದೇಶದಲ್ಲಿ ಸುಮಾರು 25 ಮಿಲಿಯನ್ ಜನರು ಬಡವರು ಮತ್ತು ಭೂರಹಿತರಾಗಿರುವ ಈ ಸಮಯದಲ್ಲಿ, ಒಂದಲ್ಲ, ಎರಡಲ್ಲ, ಹತ್ತು ಲಕ್ಷ ಎಕರೆ ಕೃಷಿ ಭೂಮಿ ಸೇನೆಯ ಕೈಗೆ ಹೋಗುತ್ತದೆ ಎಂಬ ಆತಂಕ ಮನೆ ಮಾಡಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡಾ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror