ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಭಾರತ, ಪಾಕಿಸ್ತಾನದೊಂದಿಗಿನ ತನ್ನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿದೆ. ಇದೀಗ ಭಾರತದಲ್ಲಿ ಚಾಲ್ತಿಯಲ್ಲಿದ್ದ ಪಾಕಿಸ್ತಾನ ಸರ್ಕಾರದ ಅಧಿಕೃತ ಎಕ್ಸ್ ಖಾತೆ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿದ್ದ ಪಾಕ್ ಸರ್ಕಾರದ ಎಲ್ಲಾ ಅಧಿಕೃತ ಖಾತೆಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ. ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ಭಾರತ ಸರ್ಕಾರವು ಕೈಗೊಂಡಿದ್ದ 6 ಪ್ರಮುಖ ನಿರ್ಧಾರಗಳನ್ನು ಪಾಕ್ ಸರ್ಕಾರ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರವಾಗಿ ಟೀಕಿಸಿತ್ತು. ಅಲ್ಲದೆ, ಭಾರತದ ಘನತೆ, ಗೌರವವನ್ನು ಪ್ರಶ್ನಿಸುವ ರೀತಿಯ ಹೇಳಿಕೆಗಳನ್ನು ಪೋಸ್ಟ್ ಮಾಡಲಾಗುತ್ತಿತ್ತು. ಈ ನಡುವೆ, ಪಾಕಿಸ್ತಾನದ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿಮೆ ಮಾಡಲು ತೀರ್ಮಾನಿಸಿರುವ ಕೇಂದ್ರ ಸರ್ಕಾರವು, ಭಾರತದಲ್ಲಿ ಇರುವ ಪಾಕಿಸ್ತಾನದ ದೂತಾವಾಸ ಕಚೇರಿಗಳಲ್ಲಿನ ಮಿಲಿಟರಿ ರಾಜತಾಂತ್ರಿಕರನ್ನು ದೇಶದಿಂದ ಹೊರಗೆ ಕಳುಹಿಸಲು ತೀರ್ಮಾನಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel