ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

April 30, 2024
10:46 AM

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ. ಅದೇ ವೇಳೆಗೆ ಪಾಕಿಸ್ತಾನ ಕೆಲ ನಾಯಕರು ಭಾರತದ ಬೆಳವಣಿಗೆ ಬಗ್ಗೆ, ಆಡಳಿತದ ಬಗ್ಗೆ ಹೊಗಳಿದ್ದು ಇದೆ. ಇದೀಗ ಸೂಪರ್‌ ಪವರ್‌(Super Power) ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ(Bankruptcy) ತಪ್ಪಿಸಿಕೊಳ್ಳಲು ಭಿಕ್ಷೆ(Begging) ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ (Maulana Fazlur Rehman)ಹೇಳಿದ್ದಾರೆ.

ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್‌ ಪವರ್‌ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ.

ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ದಿವಾಳಿತನ ತಪ್ಪಿಸಲು ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಭಿಕ್ಷೆ ಬೇಡುತ್ತಿದೆ ಎಂದು ರೆಹಮಾನ್‌ ಬೇಸರಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?
January 9, 2026
7:43 AM
by: ಮಹೇಶ್ ಪುಚ್ಚಪ್ಪಾಡಿ
ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror