ಸೌದಿ ರಾಜನ ಜೊತೆ ಕಾಶ್ಮೀರ ಗಡಿ ಸಮಸ್ಯೆ ಪ್ರಸ್ತಾಪಿಸಿದ ಪಾಕಿಸ್ತಾನ | ಪಾಕ್‌ ನರಿ ಬುದ್ಧಿಗೆ ಎಚ್ಚರಿಕೆಯ ಉತ್ತರ ನೀಡಿದ ಭಾರತ

April 9, 2024
8:32 PM

ಭಾರತದಲ್ಲಿ ಲೋಕಸಭಾ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ(Jammu&Kashmir) ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ವಿಷಯ ಚರ್ಚೆಯಲ್ಲಿದೆ. ಈ ನಡುವೆ ಪಾಕ್‌ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೌದಿ ಆಡಳಿತಗಾರ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್(Prince Mohammed bin Salman) ಅವರು ನಡೆಸಿದ ಸಭೆಯಲ್ಲಿ ʻಕಾಶ್ಮೀರʼ ಗಡಿ (Kashmir Border) ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಶೆಹಬಾಜ್ ಷರೀಫ್ ಮತ್ತು ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್  ಇದೇ ಏಪ್ರಿಲ್‌ 7 ರಂದು ಮೆಕ್ಕಾದ ಅಲ್-ಸಫಾ ಅರಮನೆಯಲ್ಲಿ ಸಭೆ ನಡೆಸಿದ್ದಾರೆ. ಇದಾದ ಒಂದು ದಿನದ ನಂತರ ಸಭೆಯ ಉದ್ದೇಶವನ್ನು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ಗಡಿ ಸಮಸ್ಯೆಯನ್ನು (Kashmir Border Controversy) ಬಗೆಹರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸಕಾರಾತ್ಮಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅನ್ವೇಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉಭಯ ದೇಶಗಳನ್ನ ನಡುವೆ ಇರುವ ಸಮಸ್ಯೆಗಳನ್ನು ಪರಿಹರಿಸಲು, ಅದರಲ್ಲೂ ಮುಖ್ಯವಾಗಿ ಕಾಶ್ಮೀರ ವಿವಾದ ಪರಿಹರಿಸಿ ಶಾಂತಿ ನೆಲೆಸುವಂತೆ ಮಾಡಬೇಕು. ಈ ಕುರಿತು ಮಾತುಕತೆ ನಡೆಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು. ಭಯೋತ್ಪಾದನೆ, ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಾಮಾನ್ಯ ನೆರೆಯ ಸಬಂಧಗಳನ್ನು ಬಯಸುತ್ತದೆ ಎಂಬುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತ ಸರ್ಕಾರ, ಕಾಶ್ಮೀರ ಗಡಿ ಸಮಸ್ಯೆ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಮಸ್ಯೆಯಾಗಿದೆ. ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯ ಪ್ರಶ್ನೆಯೇ ಇಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಶಾಶ್ವತವಾಗಿಯೇ ಉಳಿಯುತ್ತದೆ. ಇದನ್ನು ಭಾರತ, ಪಾಕಿಸ್ತಾನಕ್ಕೆ ಪದೇ ಪದೇ ನೆನಪಿಸುತ್ತಿದೆ ಎಂದು ಒತ್ತಿ ಹೇಳಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಧಾರಣೆ ಏರಿಕೆ | ಒಮ್ಮೆಲೇ ಬೇಡಿಕೆ ಹೆಚ್ಚಳದಿಂದ ಮಾರುಕಟ್ಟೆಯಲ್ಲಿ ಅಸ್ಥಿರತೆ – ಭವಿಷ್ಯದಲ್ಲಿ ಗುಣಮಟ್ಟದ ಅಡಿಕೆಗೆ ಬೇಡಿಕೆ ನಿರೀಕ್ಷೆ
January 8, 2026
7:16 AM
by: ದ ರೂರಲ್ ಮಿರರ್.ಕಾಂ
ಚಿಕಿತ್ಸೆ ಮುಗಿದರೂ ಕ್ಯಾನ್ಸರ್ ಅಪಾಯ ಏಕೆ ಮುಗಿಯುವುದಿಲ್ಲ?
January 7, 2026
11:10 PM
by: ದ ರೂರಲ್ ಮಿರರ್.ಕಾಂ
‌ ಭೂಮಿಗೆ ಬಿದ್ದ ಪ್ಲಾಸ್ಟಿಕ್ ಕರಗುವಂತೆ ಮಾಡಬಹುದು…!, ಇದು ಪ್ಲಾಸ್ಟಿಕ್ ಮಾಲಿನ್ಯಕ್ಕೆ ಪರಿಹಾರವೇ?
January 7, 2026
10:43 PM
by: ದ ರೂರಲ್ ಮಿರರ್.ಕಾಂ
2026 ರಲ್ಲಿ ಕೃಷಿ ಕ್ಷೇತ್ರ ಸ್ಥಿರತೆ , ಆದರೆ ಅಸಮಾನತೆ ಮುಂದುವರಿಕೆ
January 7, 2026
10:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror