ಭಾರತದಲ್ಲಿ ಲೋಕಸಭಾ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ(Jammu&Kashmir) ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ವಿಷಯ ಚರ್ಚೆಯಲ್ಲಿದೆ. ಈ ನಡುವೆ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೌದಿ ಆಡಳಿತಗಾರ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್(Prince Mohammed bin Salman) ಅವರು ನಡೆಸಿದ ಸಭೆಯಲ್ಲಿ ʻಕಾಶ್ಮೀರʼ ಗಡಿ (Kashmir Border) ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಶೆಹಬಾಜ್ ಷರೀಫ್ ಮತ್ತು ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಇದೇ ಏಪ್ರಿಲ್ 7 ರಂದು ಮೆಕ್ಕಾದ ಅಲ್-ಸಫಾ ಅರಮನೆಯಲ್ಲಿ ಸಭೆ ನಡೆಸಿದ್ದಾರೆ. ಇದಾದ ಒಂದು ದಿನದ ನಂತರ ಸಭೆಯ ಉದ್ದೇಶವನ್ನು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಇರುವ ಕಾಶ್ಮೀರ ಗಡಿ ಸಮಸ್ಯೆಯನ್ನು (Kashmir Border Controversy) ಬಗೆಹರಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸಕಾರಾತ್ಮಕವಾಗಿ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅನ್ವೇಷಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಭಯ ದೇಶಗಳನ್ನ ನಡುವೆ ಇರುವ ಸಮಸ್ಯೆಗಳನ್ನು ಪರಿಹರಿಸಲು, ಅದರಲ್ಲೂ ಮುಖ್ಯವಾಗಿ ಕಾಶ್ಮೀರ ವಿವಾದ ಪರಿಹರಿಸಿ ಶಾಂತಿ ನೆಲೆಸುವಂತೆ ಮಾಡಬೇಕು. ಈ ಕುರಿತು ಮಾತುಕತೆ ನಡೆಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು. ಭಯೋತ್ಪಾದನೆ, ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಪಾಕಿಸ್ತಾನ ಭಾರತದೊಂದಿಗೆ ಸಾಮಾನ್ಯ ನೆರೆಯ ಸಬಂಧಗಳನ್ನು ಬಯಸುತ್ತದೆ ಎಂಬುದಾಗಿ ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾರತ ಸರ್ಕಾರ, ಕಾಶ್ಮೀರ ಗಡಿ ಸಮಸ್ಯೆ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಮಸ್ಯೆಯಾಗಿದೆ. ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯ ಪ್ರಶ್ನೆಯೇ ಇಲ್ಲ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿ ಶಾಶ್ವತವಾಗಿಯೇ ಉಳಿಯುತ್ತದೆ. ಇದನ್ನು ಭಾರತ, ಪಾಕಿಸ್ತಾನಕ್ಕೆ ಪದೇ ಪದೇ ನೆನಪಿಸುತ್ತಿದೆ ಎಂದು ಒತ್ತಿ ಹೇಳಿದೆ.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…