ರಷ್ಯಾ-ಉಕ್ರೇನ್‌ ಯುದ್ಧ | ಟರ್ಕಿ ಮತ್ತು ಪಾಕಿಸ್ತಾನಿ ವಿದ್ಯಾರ್ಥಿಗಳಿಗೂ ನೆರವಾದ ಭಾರತದ ತ್ರಿವರ್ಣ ಧ್ವಜ |

March 4, 2022
9:31 AM

ಉಕ್ರೇನ್‌ ರಷ್ಯಾ ಯುದ್ಧದ ಸಂದರ್ಭ ರಕ್ಷಣೆಗಾಗಿ ಪರದಾಟ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ದೇಶದ ತ್ರಿವರ್ಣ ಧ್ವಜವು ನೆರವಿಗೆ ಬಂದಿತ್ತು. ಭಾರತದ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪಾಕಿಸ್ತಾನ ಮತ್ತು ಟರ್ಕಿಯಿಂದ ಬಂದವರಿಗೆ ಕೂಡಾ  ಸಹಾಯ ಮಾಡಿತು.

ಉಕ್ರೇನ್‌ನಿಂದ ರೊಮೇನಿಯಾದ ಬುಕಾರೆಸ್ಟ್ ನಗರಕ್ಕೆ ಆಗಮಿಸಿದ ಭಾರತೀಯ ವಿದ್ಯಾರ್ಥಿಗಳು, ಯುದ್ಧ ಪೀಡಿತ ಪ್ರದೇಶದ ವಿವಿಧ ಚೆಕ್‌ಪೋಸ್ಟ್‌ಗಳನ್ನು ಸುರಕ್ಷಿತವಾಗಿ ದಾಟಲು ಭಾರತದ ರಾಷ್ಟ್ರೀಯ ತ್ರಿವರ್ಣ ಧ್ವಜವು ತಮಗೆ ಮತ್ತು ಕೆಲವು ಪಾಕಿಸ್ತಾನಿ ಟರ್ಕಿಶ್ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಉಕ್ರೇನ್‌ನ ನೆರೆಯ ದೇಶಗಳಿಂದ ‘ಆಪರೇಷನ್ ಗಂಗಾ’ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಸ್ಥಳಾಂತರಿಸುವ ವಿಮಾನಗಳನ್ನು ಹಿಡಿಯಲು ಭಾರತೀಯ ವಿದ್ಯಾರ್ಥಿಗಳು ರೊಮೇನಿಯನ್ ನಗರಕ್ಕೆ ಆಗಮಿಸಿದ್ದಾರೆ. ಏರ್ ಇಂಡಿಯಾ, ಸ್ಪೈಸ್ ಜೆಟ್ ಮತ್ತು ಇಂಡಿಗೋ ವಿಶೇಷ ಸ್ಥಳಾಂತರಿಸುವ ವಿಮಾನಗಳನ್ನು ಹಾರಿಸುತ್ತಿವೆ. ಸುಮಾರು 18 ಸಾವಿರಕ್ಕೂ ಅಧಿಕ ಭಾರತೀಯರನ್ನು ಭಾರತ ಸರ್ಕಾರವು ರಕ್ಷಣೆ ಮಾಡಿದೆ. ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.

ಭಾರತೀಯ ವಿದ್ಯಾರ್ಥಿಗಳ ಜೊತೆಗೆ ಪಾಕಿಸ್ತಾನ, ಟರ್ಕಿಶ್‌ ವಿದ್ಯಾರ್ಥಿಗಳೂ ಭಾರತೀಯ ಧ್ವಜವನ್ನು ಹಿಡಿದುಕೊಂಡು ಯುದ್ಧ ಭೂಮಿಯ ಚೆಕ್‌ ಪೋಸ್ಟ್‌ ದಾಟಿ ಬಂದಿದ್ದರು. ವಿದ್ಯಾರ್ಥಿಗಳು ಭಾರತೀಯ ಧ್ವಜಗಳನ್ನು  ಮಾರುಕಟ್ಟೆಯಿಂದ ಸ್ಪ್ರೇ ಪೇಂಟ್‌ಗಳನ್ನು ಖರೀದಿಸಿ ರಚಿಸಿದ್ದರು. ಗಡಿಭಾಗಕ್ಕೆ ಬಂದ ಬಳಿಕವೂ ಆ ದೇಶದ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದರೆ ಭಾರತೀಯ ವಿದ್ಯಾರ್ಥಿಗಳು ತಮಗಾಗಿ ಕಾಯುತ್ತಿದ್ದ ವಿಮಾನದಕ್ಕಿ ಭಾರತಕ್ಕೆ ಬಂದಿಳಿದರು. ( Republic World Vedio ಇಲ್ಲಿದೆ )

(ವಿಡಿಯೋ ಕೃಪೆ : ರಿಪಬ್ಲಿಕ್‌ ಟಿವಿ)

“ನಾನು ಮಾರುಕಟ್ಟೆಗೆ ಹೋಗಿ,  ಕಲರ್ ಸ್ಪ್ರೇಗಳು ಮತ್ತು ಪರದೆಯನ್ನು ಖರೀದಿಸಿದೆ. ನಂತರ ನಾನು ಪರದೆಯನ್ನು ಕತ್ತರಿಸಿ ಭಾರತೀಯ ತ್ರಿವರ್ಣ ಧ್ವಜವನ್ನು ತಯಾರಿಸಲು ಅದನ್ನು ಸಿಂಪಡಿಸಿದೆ” ಎಂದು ವಿದ್ಯಾರ್ಥಿಯೊಬ್ಬರು ಸುದ್ದಿ ಸಂಸ್ಥೆಗೆ ಹೇಳಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ
August 23, 2026
2:16 PM
by: ದ ರೂರಲ್ ಮಿರರ್.ಕಾಂ
ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ
August 23, 2026
12:18 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ
August 23, 2026
11:47 AM
by: ಮಿರರ್‌ ಡೆಸ್ಕ್‌
ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?
August 22, 2026
10:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror