(ಸಾಂದರ್ಭಿಕ ಚಿತ್ರ )
ಉಕ್ರೇನ್ ರಷ್ಯಾ ಯುದ್ಧದ ಸಂದರ್ಭ ರಕ್ಷಣೆಗಾಗಿ ಪರದಾಟ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ದೇಶದ ತ್ರಿವರ್ಣ ಧ್ವಜವು ನೆರವಿಗೆ ಬಂದಿತ್ತು. ಭಾರತದ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪಾಕಿಸ್ತಾನ ಮತ್ತು ಟರ್ಕಿಯಿಂದ ಬಂದವರಿಗೆ ಕೂಡಾ ಸಹಾಯ ಮಾಡಿತು.
ಉಕ್ರೇನ್‌ನಿಂದ ರೊಮೇನಿಯಾದ ಬುಕಾರೆಸ್ಟ್ ನಗರಕ್ಕೆ ಆಗಮಿಸಿದ ಭಾರತೀಯ ವಿದ್ಯಾರ್ಥಿಗಳು, ಯುದ್ಧ ಪೀಡಿತ ಪ್ರದೇಶದ ವಿವಿಧ ಚೆಕ್‌ಪೋಸ್ಟ್‌ಗಳನ್ನು ಸುರಕ್ಷಿತವಾಗಿ ದಾಟಲು ಭಾರತದ ರಾಷ್ಟ್ರೀಯ ತ್ರಿವರ್ಣ ಧ್ವಜವು ತಮಗೆ ಮತ್ತು ಕೆಲವು ಪಾಕಿಸ್ತಾನಿ ಟರ್ಕಿಶ್ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಉಕ್ರೇನ್‌ನ ನೆರೆಯ ದೇಶಗಳಿಂದ ‘ಆಪರೇಷನ್ ಗಂಗಾ’ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಸ್ಥಳಾಂತರಿಸುವ ವಿಮಾನಗಳನ್ನು ಹಿಡಿಯಲು ಭಾರತೀಯ ವಿದ್ಯಾರ್ಥಿಗಳು ರೊಮೇನಿಯನ್ ನಗರಕ್ಕೆ ಆಗಮಿಸಿದ್ದಾರೆ. ಏರ್ ಇಂಡಿಯಾ, ಸ್ಪೈಸ್ ಜೆಟ್ ಮತ್ತು ಇಂಡಿಗೋ ವಿಶೇಷ ಸ್ಥಳಾಂತರಿಸುವ ವಿಮಾನಗಳನ್ನು ಹಾರಿಸುತ್ತಿವೆ. ಸುಮಾರು 18 ಸಾವಿರಕ್ಕೂ ಅಧಿಕ ಭಾರತೀಯರನ್ನು ಭಾರತ ಸರ್ಕಾರವು ರಕ್ಷಣೆ ಮಾಡಿದೆ. ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.
ಭಾರತೀಯ ವಿದ್ಯಾರ್ಥಿಗಳ ಜೊತೆಗೆ ಪಾಕಿಸ್ತಾನ, ಟರ್ಕಿಶ್ ವಿದ್ಯಾರ್ಥಿಗಳೂ ಭಾರತೀಯ ಧ್ವಜವನ್ನು ಹಿಡಿದುಕೊಂಡು ಯುದ್ಧ ಭೂಮಿಯ ಚೆಕ್ ಪೋಸ್ಟ್ ದಾಟಿ ಬಂದಿದ್ದರು. ವಿದ್ಯಾರ್ಥಿಗಳು ಭಾರತೀಯ ಧ್ವಜಗಳನ್ನು ಮಾರುಕಟ್ಟೆಯಿಂದ ಸ್ಪ್ರೇ ಪೇಂಟ್‌ಗಳನ್ನು ಖರೀದಿಸಿ ರಚಿಸಿದ್ದರು. ಗಡಿಭಾಗಕ್ಕೆ ಬಂದ ಬಳಿಕವೂ ಆ ದೇಶದ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದರೆ ಭಾರತೀಯ ವಿದ್ಯಾರ್ಥಿಗಳು ತಮಗಾಗಿ ಕಾಯುತ್ತಿದ್ದ ವಿಮಾನದಕ್ಕಿ ಭಾರತಕ್ಕೆ ಬಂದಿಳಿದರು. ( Republic World Vedio ಇಲ್ಲಿದೆ )
(ವಿಡಿಯೋ ಕೃಪೆ : ರಿಪಬ್ಲಿಕ್ ಟಿವಿ)
“ನಾನು ಮಾರುಕಟ್ಟೆಗೆ ಹೋಗಿ, ಕಲರ್ ಸ್ಪ್ರೇಗಳು ಮತ್ತು ಪರದೆಯನ್ನು ಖರೀದಿಸಿದೆ. ನಂತರ ನಾನು ಪರದೆಯನ್ನು ಕತ್ತರಿಸಿ ಭಾರತೀಯ ತ್ರಿವರ್ಣ ಧ್ವಜವನ್ನು ತಯಾರಿಸಲು ಅದನ್ನು ಸಿಂಪಡಿಸಿದೆ” ಎಂದು ವಿದ್ಯಾರ್ಥಿಯೊಬ್ಬರು ಸುದ್ದಿ ಸಂಸ್ಥೆಗೆ ಹೇಳಿದ್ದರು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…