ಪಾಲಡ್ಕದಲ್ಲಿ ಬೈಕ್ ಮತ್ತು ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲೆತ್ನಿಸಿದ ಆರೋಪಿಯು ಸುಳ್ಯದಲ್ಲಿ ಸೆರೆ

March 25, 2022
7:05 PM

ಪಾಲಡ್ಕದಲ್ಲಿ ರಸ್ತೆ ಬದಿ ನಿಂತಿದ್ದ ಬೈಕ್ ಗೆ ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಲು ಯತ್ನಿಸಿ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾಗಿಸಿ ಅಲ್ಲಿಯೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಕಾರು ಚಾಲಕನನ್ನು ಕಾರು ಸಮೇತ ಸೆರೆ ಹಿಡಿದ ಘಟನೆ ಮಾ.25 ರ ಸಂಜೆ ವರದಿಯಾಗಿದೆ.

ಪೋಲಿಸರು ಆರೋಪಿಯನ್ನು ಸೆರೆ ಹಿಡಿದು ವಿಚಾರಣೆ ನಡೆಸಲಾಗಿ ಕಾರು ಚಾಲಕ ಪೆರಾಜೆ ಮೂಲದ ಸುಕುಮಾರ ಗರುಗುಂಜ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬೈಕ್ ಸವಾರ ಪಾಲಡ್ಕದ ಸಚಿನ್ ಸಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾದರೆ, ಕೂಲಿಯಾಳುಗಳನ್ನು ಸುಳ್ಯಕ್ಕೆ ಕರೆದೊಯ್ಯುತ್ತಿದ್ದ ರಿಕ್ಷಾ ನಜ್ಜುಗುಜ್ಜಾಗಿದೆ. ರಿಕ್ಷಾದಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಆಲೆಟ್ಟಿ ಕಡೆ ಪರಾರಿಯಾಗಲೆತ್ನಿಸಿದಾಗ ಪೋಲಿಸರು ಕಾರು ಅಡ್ಡಗಟ್ಟಿ ಆರೋಪಿಯನ್ನು ಕಾರು ಸಮೇತ ಸೆರೆ ಹಿಡಿದು ಠಾಣೆಗೆ ಕರೆದೊಯ್ದಿರುವುದಾಗಿ ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?
September 8, 2026
3:15 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror