ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

May 31, 2025
9:45 PM

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ. ಜೂನ್.‌1 ರವಿವಾರದಂದು ಪುತ್ತೂರು ಬೊಳ್ವಾರಿನ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ಮಲರಾಯ ಸಪರಿವಾರ ಕ್ಷೇತ್ರದ ವಠಾರದಲ್ಲಿ ಸಂಜೆ ಗಂಟೆ 5-30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

Advertisement

ಈ ಸಂದರ್ಭದಲ್ಲಿ ಶ್ರೀ ಕೃಷ್ಣಪ್ರಕಾಶ್ ಉಳಿತ್ತಾಯರು ಬರೆದ ಪಾಲೆಚ್ಚಾರು ಗೋವಿಂದ ನಾಯಕ್ ಅವರ ಕಲಾಯಾನ ಕೃತಿ ‘ಗೋವಿಂದ ಗಾಥೆ’ ಅನಾವರಣಗೊಳ್ಳಲಿದೆ. ‘ಈಶಾವಾಸ್ಯ ಪೆರ್ಮಂಕಿ’ ಮತ್ತು ಶ್ರೀ ದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನ (ರಿ) ಬೊಳ್ವಾರು – ಇವರ ಜಂಟಿ ಆಯೋಜನೆಯಲ್ಲಿ ಕಾರ್ಯಕ್ರಮ ಸಂಪನ್ನವಾಗಲಿದೆ.

ಶ್ರೀ ಎಡನೀರು ಮಠಾಧೀಶ ಪರಮಪೂಜ್ಯ  ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭವನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಕಲಾ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕ್ಷೇತ್ರದ ಪವಿತ್ರಪಾಣಿ  ಬಾಲಸುಬ್ರಹ್ಮಣ್ಯ ಭಟ್ ವಹಿಸಲಿದ್ದಾರೆ. ‘ಗೋವಿಂದ ಗಾಥೆ’ ಪುಸ್ತಕದ ಕುರಿತು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ  ನಾ. ಕಾರಂತ ಪೆರಾಜೆ ಮಾತನಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಗಳೂರಿನ ಅಗರಿ ಎಂಟರ್‍ಪ್ರೈಸಸ್ ಇದರ  ಅಗರಿ ರಾಘವೇಂದ್ರ ರಾವ್, ಸಾಹಿತಿ  ಲಕ್ಷ್ಮೀ ಮಚ್ಚಿನ, ವಿಶ್ರಾಂತ ಪ್ರಾಂಶುಪಾಲ  ಮಹಾಲಿಂಗೇಶ್ವರ ಭಟ್ ಹಾಗೂ ಹಿರಿಯ ಮದ್ಲೆಗಾರ್  ವೆಂಕಟ್ರಮಣ ಉಳಿತ್ತಾಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಮಾರಂಭದ ಪೂರ್ವದಲ್ಲಿ ‘ಜಾಂಬವತಿ ಕಲ್ಯಾಣ’ ಪ್ರಸಂಗದ ತಾಳಮದ್ದಳೆ ಜರುಗಲಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ
July 16, 2025
7:17 AM
by: ದ ರೂರಲ್ ಮಿರರ್.ಕಾಂ
ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ
July 15, 2025
9:39 PM
by: ದ ರೂರಲ್ ಮಿರರ್.ಕಾಂ
ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ
July 15, 2025
9:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror