ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’ ಪ್ರದಾನ. ಜೂನ್.1 ರವಿವಾರದಂದು ಪುತ್ತೂರು ಬೊಳ್ವಾರಿನ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ಮಲರಾಯ ಸಪರಿವಾರ ಕ್ಷೇತ್ರದ ವಠಾರದಲ್ಲಿ ಸಂಜೆ ಗಂಟೆ 5-30ಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.
ಈ ಸಂದರ್ಭದಲ್ಲಿ ಶ್ರೀ ಕೃಷ್ಣಪ್ರಕಾಶ್ ಉಳಿತ್ತಾಯರು ಬರೆದ ಪಾಲೆಚ್ಚಾರು ಗೋವಿಂದ ನಾಯಕ್ ಅವರ ಕಲಾಯಾನ ಕೃತಿ ‘ಗೋವಿಂದ ಗಾಥೆ’ ಅನಾವರಣಗೊಳ್ಳಲಿದೆ. ‘ಈಶಾವಾಸ್ಯ ಪೆರ್ಮಂಕಿ’ ಮತ್ತು ಶ್ರೀ ದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಪ್ರತಿಷ್ಠಾನ (ರಿ) ಬೊಳ್ವಾರು – ಇವರ ಜಂಟಿ ಆಯೋಜನೆಯಲ್ಲಿ ಕಾರ್ಯಕ್ರಮ ಸಂಪನ್ನವಾಗಲಿದೆ.
ಶ್ರೀ ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಸಮಾರಂಭವನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಟಿ.ಶ್ಯಾಮ ಭಟ್ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಯಕ್ಷಕಲಾ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಕ್ಷೇತ್ರದ ಪವಿತ್ರಪಾಣಿ ಬಾಲಸುಬ್ರಹ್ಮಣ್ಯ ಭಟ್ ವಹಿಸಲಿದ್ದಾರೆ. ‘ಗೋವಿಂದ ಗಾಥೆ’ ಪುಸ್ತಕದ ಕುರಿತು ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ ಮಾತನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಂಗಳೂರಿನ ಅಗರಿ ಎಂಟರ್‍ಪ್ರೈಸಸ್ ಇದರ ಅಗರಿ ರಾಘವೇಂದ್ರ ರಾವ್, ಸಾಹಿತಿ ಲಕ್ಷ್ಮೀ ಮಚ್ಚಿನ, ವಿಶ್ರಾಂತ ಪ್ರಾಂಶುಪಾಲ ಮಹಾಲಿಂಗೇಶ್ವರ ಭಟ್ ಹಾಗೂ ಹಿರಿಯ ಮದ್ಲೆಗಾರ್ ವೆಂಕಟ್ರಮಣ ಉಳಿತ್ತಾಯ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಮಾರಂಭದ ಪೂರ್ವದಲ್ಲಿ ‘ಜಾಂಬವತಿ ಕಲ್ಯಾಣ’ ಪ್ರಸಂಗದ ತಾಳಮದ್ದಳೆ ಜರುಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…