Advertisement
ಸುದ್ದಿಗಳು

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

Share

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ ಚಿಂತನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರು ಪ್ರವಾಸ ಹಾಗೂ ಮಾಹಿತಿ ಕಾರ್ಯಕ್ರಮ ಮಡೆಯಿತು.  ಸುಳ್ಯ ತಾಲೂಕಿನಲ್ಲಿ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ಪಂಬೆತ್ತಾಡಿಯ  ಕೆ ಎಸ್ ಅಶೋಕ್ ಕುಮಾರ್ ಕರಿಕ್ಕಳ ರೈತರ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಜನರು ಭಾಗವಹಿಸಿದ್ದರು. ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ ಮಂಗಳೂರು ಜಿಲ್ಲೆಯ ತೋಟಗಾರಿಕಾ ಡೆಪ್ಯುಟಿ ಡೈರೆಕ್ಟರ್ ಮಂಜುನಾಥ ಅವರು ಹಾಗೂ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ತೋಟಗಾರಿಕಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಳೆ ಬೆಳೆಯನ್ನು ಅಡಿಕೆಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಅಡುಗೆ ಎಣ್ಣೆ ಇಂದು ದೇಶದಲ್ಲಿ ಬೇಡಿಕೆ ಇದೆ. ಮುಖ್ಯವಾಗಿ ತಾಳೆ ಎಣ್ಣೆ ಉತ್ಪಾದನೆಗಾಗಿ ಬೆಳೆಸಲಾಗುತ್ತದೆ. ಹೀಗಾಗಿ ಉತ್ತಮ ಬೇಡಿಕೆ ಇದೆ. ಇದಕ್ಕಾಗಿ ರೈತರಿಗೆ ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

3 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

12 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

13 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

20 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

20 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

21 hours ago