ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ದೇಶದಲ್ಲಿ ಬೇಳೆ ಕಾಳು, ಎಣ್ಣೆಕಾಳುಗಳಿಗೆ ಸಾಕಷ್ಟು ಬೇಡಿಕೆ ಇದೆ. ದೇಶದ ಒಟ್ಟು ಬೇಡಿಕೆಯ ಶೇ 70ರಷ್ಟು ಬೇಳೆ ಕಾಳು ಹಾಗೂ ಎಣ್ಣೆಕಾಳುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾವಲಂಬನೆ ಸಾಧಿಸಲು ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ ಎಂದ ಅವರು ಎಲ್ಲೆಲ್ಲಿ ಹೆಚ್ಚು ತೆಂಗು ಬೆಳೆಯಲಾಗುತ್ತದೋ ಅಲ್ಲಿ ತಾಳೆ ಮರಗಳನ್ನು ಬೆಳೆಸಲು ಅನುಕೂಲಕರ ವಾತಾವರಣ ಇರುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಎಣ್ಣೆ ಬೀಜಗಳನ್ನು ಒದಗಿಸಲಾಗುತ್ತದೆ ಎಂದರು.
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…