ಜಿ.ಎಸ್.ಟಿ ತೆರಿಗೆ ಹಣ ಪಾವತಿಸದೇ ಪಾನ್ ಮಸಲಾ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನಲೆಯಿಂದ ತೆರಿಗೆ ಹಾಗೂ ಡಿಜಿಜಿಐ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಈ ವೇಳೆ ಮನೆಗಳಲ್ಲಿ ಅಕ್ರಮವಾಗಿ ಬಚ್ಚಿಟ್ಟಿರುವ ನೋಟುಗಳ ಕಂತೆ ಪತ್ತೆಯಾಗಿದ್ದು ಸುಮಾರು 150 ಕೋಟಿ ರೂ ಗೂ ಅಧಿಕ ಹಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನೌಜ್, ಮುಂಬೈ, ಗುಜರಾತ್‌ನ ವಿವಿಧ ಸ್ಥಳಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅನಧಿಕೃತವಾದ ವ್ಯವಹಾರ ಹಾಗೂ ಹಣ ದಾಸ್ತಾನು ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತೆರಿಗೆ ಪಾವತಿಸಿಯೇ ವ್ಯವಹಾರ ನಡೆಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಅಡಿಕೆ ಧಾರಣೆ ಏರಿಕೆ ಬಳಿಕ ಇಂತಹ ಧಾಳಿಗಳು ಹೆಚ್ಚಾಗಿ ಕಂಡುಬಂದಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…