ಝೀ ಕನ್ನಡ ಬ್ರಹ್ಮಗಂಟು ಧಾರವಾಹಿ ಲಕ್ಕಿ ಖ್ಯಾತಿಯ ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ ಅವರು ಭರತ್ ಬೋಪಣ್ಣ ಅವರಿಗೆ ಸ್ಮರಣಿಕೆ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆಯು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಸೇವೆ ನೀಡುತ್ತಿರುವ ರಕ್ಷಾ ಆಸ್ಪತ್ರೆಯ ವೈದ್ಯರುಗಳಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ, ಡಾ| ಅವಿನಾಶ್ ಶಾಂತಿಮೂಲೆ, ಡಾ| ಜಯಶ್ರೀ ಭಟ್, ಡಾ| ಅನಿತಾ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಭರತ್ ಬೋಪಣ್ಣ ಪ್ರಶಂಸೆ ವ್ಯಕ್ತಪಡಿಸಿದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…