ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್

November 18, 2025
1:03 PM

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದ ಕಾರಣದಿಂದ ರವಿಕಿರಣ ಎಂಬವರಿಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ 1500 ರೂಪಾಯಿ ದಂಡ ವಿಧಿಸಿದ ಘಟನೆ ನಡೆದಿದೆ.

ನಾಡಿನ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರಾ ಉತ್ಸವ ಆರಂಭಗೊಂಡಿದೆ. ಅನೇಕ ಭಕ್ತಾದಿಗಳು ವಿವಿಧ ಸೇವೆಗಳಲ್ಲಿ ಭಾಗವಹಿಸುತ್ತಾರೆ. ಇಲ್ಲಿನ ಕುಮಾರಧಾರಾ ನದಿ ಕೂಡಾ ಅಷ್ಟೇ ಪವಿತ್ರವಾದ ನದಿ. ಈ ನದಿಯಲ್ಲಿ ಸ್ನಾನ ಮಾಡಿ ಬೀದಿ ಮಡೆಸ್ನಾನ ಮಾಡುವುದು ಕೂಡಾ ಪ್ರಮುಖ ಸೇವೆ. ಹೀಗಾಗಿ ಕುಮಾರಧಾರಾ ನದಿಯನ್ನು ಅತ್ಯಂತ ಪವಿತ್ರವಾಗಿ ಉಳಿಸಿಕೊಳ್ಳಬೇಕಾದ್ದು ಎಲ್ಲರ ಜವಾಬ್ದಾರಿ. ಅನೇಕ ಸಮಯಗಳಿಂದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆಯಬೇಡಿ ಎಂದು  ಮನವಿ ಮನವಿ ಮೇಲೆ ಮಾಡುತ್ತಲೇ ಇದ್ದರೂ ಕೆಲವು ಪ್ರವಾಸಿಗರು ನದಿಗೆ ತ್ಯಾಜ್ಯ ಎಸೆಯುತ್ತಲೇ ಇದ್ದಾರೆ. ಅನೇಕ ಬಾರಿ ನದಿ ಸ್ವಚ್ಛತೆ ಮಾಡಿದರೂ ಮತ್ತೆ ಮತ್ತೆ ತ್ಯಾಜ್ಯ ಎಸೆಯುವುದು ಕಂಡುಬರುತ್ತಿದೆ. ಇದೀಗ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಎಚ್ಚೆತ್ತುಕೊಂಡಿದೆ. ನದಿಗೆ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸುವ ಕೆಲಸ ಮಾಡುತ್ತಿದೆ.  ಇನ್ನೀಗ ಜಾತ್ರಾ ಉತ್ಸವ ಆರಂಭಗೊಂಡಿದೆ. ನಾಡಿನ ವಿವಿದೆಡೆಯಿಂದ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ಲಾಸ್ಟಿಕ್‌ ಎಸೆಯುವುದು, ನದಿಗೆ ತ್ಯಾಜ್ಯ ಎಸೆಯುವುದು ಕಂಡುಬಂದರೆ  ಸ್ಥಳೀಯರು ಕೂಡಾ ಫೋಟೊ ತೆಗೆದು ಪಂಚಾಯತ್‌ ಗೆ ನೀಡುತ್ತಿದ್ದಾರೆ. ಪವಿತ್ರ  ಕ್ಷೇತ್ರವಾದ ಕುಕ್ಕೆಯ ಆಸುಪಾಸಿನ ಎಲ್ಲೂ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ವಹಿಸಿ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror