ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದ ಕಾರಣದಿಂದ ರವಿಕಿರಣ ಎಂಬವರಿಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ 1500 ರೂಪಾಯಿ ದಂಡ ವಿಧಿಸಿದ ಘಟನೆ ನಡೆದಿದೆ.
ನಾಡಿನ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಜಾತ್ರಾ ಉತ್ಸವ ಆರಂಭಗೊಂಡಿದೆ. ಅನೇಕ ಭಕ್ತಾದಿಗಳು ವಿವಿಧ ಸೇವೆಗಳಲ್ಲಿ ಭಾಗವಹಿಸುತ್ತಾರೆ. ಇಲ್ಲಿನ ಕುಮಾರಧಾರಾ ನದಿ ಕೂಡಾ ಅಷ್ಟೇ ಪವಿತ್ರವಾದ ನದಿ. ಈ ನದಿಯಲ್ಲಿ ಸ್ನಾನ ಮಾಡಿ ಬೀದಿ ಮಡೆಸ್ನಾನ ಮಾಡುವುದು ಕೂಡಾ ಪ್ರಮುಖ ಸೇವೆ. ಹೀಗಾಗಿ ಕುಮಾರಧಾರಾ ನದಿಯನ್ನು ಅತ್ಯಂತ ಪವಿತ್ರವಾಗಿ ಉಳಿಸಿಕೊಳ್ಳಬೇಕಾದ್ದು ಎಲ್ಲರ ಜವಾಬ್ದಾರಿ. ಅನೇಕ ಸಮಯಗಳಿಂದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆಯಬೇಡಿ ಎಂದು ಮನವಿ ಮನವಿ ಮೇಲೆ ಮಾಡುತ್ತಲೇ ಇದ್ದರೂ ಕೆಲವು ಪ್ರವಾಸಿಗರು ನದಿಗೆ ತ್ಯಾಜ್ಯ ಎಸೆಯುತ್ತಲೇ ಇದ್ದಾರೆ. ಅನೇಕ ಬಾರಿ ನದಿ ಸ್ವಚ್ಛತೆ ಮಾಡಿದರೂ ಮತ್ತೆ ಮತ್ತೆ ತ್ಯಾಜ್ಯ ಎಸೆಯುವುದು ಕಂಡುಬರುತ್ತಿದೆ. ಇದೀಗ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಎಚ್ಚೆತ್ತುಕೊಂಡಿದೆ. ನದಿಗೆ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸುವ ಕೆಲಸ ಮಾಡುತ್ತಿದೆ. ಇನ್ನೀಗ ಜಾತ್ರಾ ಉತ್ಸವ ಆರಂಭಗೊಂಡಿದೆ. ನಾಡಿನ ವಿವಿದೆಡೆಯಿಂದ ಭಕ್ತಾದಿಗಳು ಆಗಮಿಸುತ್ತಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ಲಾಸ್ಟಿಕ್ ಎಸೆಯುವುದು, ನದಿಗೆ ತ್ಯಾಜ್ಯ ಎಸೆಯುವುದು ಕಂಡುಬಂದರೆ ಸ್ಥಳೀಯರು ಕೂಡಾ ಫೋಟೊ ತೆಗೆದು ಪಂಚಾಯತ್ ಗೆ ನೀಡುತ್ತಿದ್ದಾರೆ. ಪವಿತ್ರ ಕ್ಷೇತ್ರವಾದ ಕುಕ್ಕೆಯ ಆಸುಪಾಸಿನ ಎಲ್ಲೂ ತ್ಯಾಜ್ಯ ಎಸೆಯದಂತೆ ಎಚ್ಚರಿಕೆ ವಹಿಸಿ. ಕೃಷಿ, ಗ್ರಾಮೀಣ, ಪರಿಸರ ಸುದ್ದಿಗಳಿಗಾಗಿ ನಮ್ಮ ಚಾನೆಲ್ ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ಕಡಬ ಅರಣ್ಯ ಹಾಗೂ ಅರಣ್ಯದಂಚಿನ…
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…