ಸುದ್ದಿಗಳು

ಗಾಂಧಿ ಜಯಂತಿ | ಪಂಜದಲ್ಲಿ ಗ್ರಾಮ ಸ್ವರಾಜ್ಯಕ್ಕಾಗಿ ಉಪವಾಸ ಸತ್ಯಾಗ್ರಹ |

Share
ಗಾಂಧೀ ಜಯಂತಿ ಪ್ರಯುಕ್ತ ಅ.2  ರಂದು ಬೆಳಗ್ಗೆ ಧ್ವಜಾರೋಹಣದ ಬಳಿಕ ಗ್ರಾಮ ಸ್ವರಾಜ್ಯಕ್ಕಾಗಿ  ಪಂಜ ಗ್ರಾಪಂ ಮುಂದೆ ವಿವಿಧ ಬೇಡಿಕೆ ಮುಂದಿರಿಸಿ ಉಪವಾಸ ಸತ್ಯಾಗ್ರಹ ಪಂಜ ಮಹಾತ್ಮಾಗಾಂಧಿ  ವಿದ್ಯಾಪೀಠ ಹಾಗೂ ಪಂಜ ಗ್ರಾಮ ಸ್ವರಾಜ್ಯ ತಂಡದ ವತಿಯಿಂದ  ನಡೆಯಲಿದೆ ಎಂದು ಪುರುಷೋತ್ತಮ ಮುಡೂರು ಹಾಗೂ ಜಿನ್ನಪ್ಪ ಅಳ್ಪೆ ತಿಳಿಸಿದ್ದಾರೆ.
ಗಾಂಧಿ ಜಯಂತಿಯಂದು ಬೆಳಗ್ಗೆ 8.30 ರಿಂದ ಸಂಜೆ 4 ರ ತನಕ ಪಂಜದಲ್ಲಿರುವ ಗ್ರಾಮದ ವಿಧಾನಸೌಧ ಎದುರುಗಡೆ ಉಪವಾಸ ಸತ್ಯಾಗ್ರಹ ನಡೆಯಲಿದೆ. ಪಂಜ ಹೋಬಳಿ ಕೇಂದ್ರದಲ್ಲಿ ಇರುವಂತಹ ಇಲಾಖೆಗಳ ಬಗ್ಗೆ ಸರಕಾರಕ್ಕೆ ಹಕ್ಕೊತ್ತಾಯದ ಕುರಿತು ಕಾರ್ಯ ನಿರ್ವಹಿಸುವ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಎಲ್ಲಾ ಸೌಲಭ್ಯಗಳು ದೊರಕಿಸಿಕೊಡುವುದು ಗ್ರಾಮಸ್ವರಾಜ್ ಪಂಜ ಇದರ ಮೂಲ ಉದ್ದೇಶವಾಗಿದೆ.
ಸರಕಾರದಿಂದ ಸಿಗುವಂತಹ ಸೌಲಭ್ಯಗಳ ವಂಚನೆಯು ನಡೆದಿದೆ ಮತ್ತು ಹೋಬಳಿ ಕೇಂದ್ರದಲ್ಲಿ ಇರುವಂತಹ ಸೇವೆ ಅಂಚೆ ಇಲಾಖೆ ಪೊಲೀಸ್ ಸ್ಟೇಷನ್ ನೀರಿನ ಸೌಲಭ್ಯ , ಇಂಟರ್ನೆಟ್,  ವಿದ್ಯುತ್ , ಆರೋಗ್ಯ ಕೇಂದ್ರ , ಶೈಕ್ಷಣಿಕ ಕೇಂದ್ರಗಳು,  ಬ್ಯಾಂಕ್ ವ್ಯವಹಾರಗಳು,  ರಸ್ತೆ ಸಾರಿಗೆ ವ್ಯವಸ್ಥೆಗಳು,  ಸ್ವಚ್ಛತೆ,  ಶೌಚಾಲಯ,  ಪಶುಸಂಗೋಪನೆ,  ಕಾಲುದಾರಿಗಳ ಸಮಸ್ಯೆಗಳು,  ಕುಡಿಯುವ ನೀರಿನ ಸಮಸ್ಯೆಗಳು,  ಇತರ ಸೌಲಭ್ಯಗಳ ಬಗ್ಗೆ ಸೂಕ್ಷ್ಮವಾಗಿ ಜನರೊಂದಿಗೆ ಮಾತುಕತೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರಕಾರಕ್ಕೆ ಮುಟ್ಟಿಸುವ ವ್ಯವಸ್ಥೆ ಮಾಡಿಕೊಡಬೇಕಾಗಿದೆ. ಸತ್ಯಾಗ್ರಹದಲ್ಲಿ ಸಾರ್ವಜನಿಕರು ಯಾವುದೇ ಸಮಸ್ಯೆಗಳನ್ನು ನೀಡಬಹುದು ಎಂದು ಪ್ರಕಟಣೆಯಲ್ಲಿ ಮಹಾತ್ಮಾಗಾಂಧಿ  ವಿದ್ಯಾಪೀಠದ ಪುರುಷೋತ್ತಮ ಮುಡೂರು ಹಾಗೂ ಗ್ರಾಮಸ್ವರಾಜ್ ತಂಡ ಮುಖಂಡ, ಸಾಮಾಜಿಕ ಕಾರ್ಯಕರ್ತ  ಜಿನ್ನಪ್ಪ ಅಳ್ಪೆ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

4 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

4 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

19 hours ago

ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧ

ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…

19 hours ago

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…

19 hours ago

ಅಕ್ರಮ ಮರಳು ಗಣಿಗಾರಿಕೆ | 5 ವರ್ಷಗಳಲ್ಲಿ 47 ಕೋಟಿ ರೂಪಾಯಿ ದಂಡ ಸಂಗ್ರಹ

ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…

19 hours ago