ಶಿರಾಡಿ ಘಾಟ್‌ | ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ | ಭಾರಿ ವಾಹನ ಸಂಚಾರಕ್ಕೆ ನಡೆಯುತ್ತಿದೆ ಪರ್ಯಾಯ ರಸ್ತೆಗೆ ಸತತ ಪ್ರಯತ್ನ |

July 21, 2022
11:12 PM

ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಆದರೆ, ಸದ್ಯ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ಒಂದು ವಾರದೊಳಗಾಗಿ ಘನ ವಾಹನ ಸಂಚಾರಕ್ಕೂ ಅವಕಾಶ ನೀಡುವ ಪ್ರಯತ್ನ ಮುಂದುರಿದಿದೆ.

Advertisement
Advertisement

ಸಕಲೇಶಪುರ ತಾಲೂಕಿನ ದೋಣಿಗಾಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು. ಇದೀಗ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್‌, ಸಾರಿಗೆ ಸಂಸ್ಥೆಯ ಬಸ್‌, ರಾಜಹಂಸ, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ ಸಂಚರಿಸಬಹುದು. ಅಂಬುಲೆನ್ಸ್‌, ಅಗ್ನಿಶಾಮಕದಳದ ವಾಹನ ಸೇರಿದಂತೆ ತುರ್ತು ಸೇವಾ ವಾಹನಗಳು 24 ಗಂಟೆ ಸಂಚಾರ ಮಾಡಬಹುದು.

Advertisement

ಬುಲೆಟ್‌ ಟ್ಯಾಂಕರ್‌ಗಳು, ಕಾರ್ಗೋ ಕಂಟೈನರ್‌ಗಳು, ಉದ್ದ ಚಾಸಿ ಹೊಂದಿ ವಾಹನಗಳು, ಮಲ್ಟಿ ಎಕ್ಸೆಲ್‌ ಟ್ರಕ್‌ ಟ್ರೈಲರ್‌ಗಳು ಹಾಗೂ 20 ಟನ್‌ಗಿಂತ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ಸದ್ಯ ನಿರ್ಬಂಧಿಸಲಾಗಿದೆ. ಜುಲೈ 15 ರಿಂದ  ಈ ರಸ್ತೆಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು.

Advertisement

ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸದ್ಯದಲ್ಲೇ ಬದಲಿ ಮಾರ್ಗದ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು . ಬದಲಿ ರಸ್ತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ 2.2 ಕಿಲೋಮೀಟರ್ ಹೊಸ ರಸ್ತೆ ಮಾಡಲು 4.3 ಕೋಟಿ ಹಣವನ್ನು ಮಂಜೂರು ಮಾಡಲಾಗಿದ್ದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ಬಳಿಕ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror