ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿ ಘಾಟ್ ನಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ, ಇಲ್ಲಿನ ಜಿಲ್ಲಾಧಿಕಾರಿ ಆರ್. ಗಿರೀಶ್ ಆದೇಶ ಹೊರಡಿಸಿದ್ದಾರೆ. ಆದರೆ, ಸದ್ಯ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ. ಮುಂದಿನ ಒಂದು ವಾರದೊಳಗಾಗಿ ಘನ ವಾಹನ ಸಂಚಾರಕ್ಕೂ ಅವಕಾಶ ನೀಡುವ ಪ್ರಯತ್ನ ಮುಂದುರಿದಿದೆ.
ಸಕಲೇಶಪುರ ತಾಲೂಕಿನ ದೋಣಿಗಾಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿತ್ತು. ಇದೀಗ ಕಾರು, ಜೀಪು, ಟೆಂಪೊ, ಮಿನಿ ವ್ಯಾನ್, ಸಾರಿಗೆ ಸಂಸ್ಥೆಯ ಬಸ್, ರಾಜಹಂಸ, ಐರಾವತ ಬಸ್‌ಗಳು, 6 ಚಕ್ರದ ವಾಹನಗಳು, 20 ಟನ್ ಸಾಮರ್ಥ್ಯದ ಸರಕು ಸಾಗಣೆ ವಾಹನಗಳು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಈ ಮಾರ್ಗದಲ್ಲಿ ಸಂಚರಿಸಬಹುದು. ಅಂಬುಲೆನ್ಸ್, ಅಗ್ನಿಶಾಮಕದಳದ ವಾಹನ ಸೇರಿದಂತೆ ತುರ್ತು ಸೇವಾ ವಾಹನಗಳು 24 ಗಂಟೆ ಸಂಚಾರ ಮಾಡಬಹುದು.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು ಸದ್ಯದಲ್ಲೇ ಬದಲಿ ಮಾರ್ಗದ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು . ಬದಲಿ ರಸ್ತೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ 2.2 ಕಿಲೋಮೀಟರ್ ಹೊಸ ರಸ್ತೆ ಮಾಡಲು 4.3 ಕೋಟಿ ಹಣವನ್ನು ಮಂಜೂರು ಮಾಡಲಾಗಿದ್ದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ಬಳಿಕ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490