ಪರಮೇಶ್ವರ ಭಟ್ಟ ಬಾಳಿಲ ಪ್ರಶಸ್ತಿಗೆ ನಾರಾಯಣ ಕೃಷ್ಣ ಶಾನುಭಾಗ ಆಯ್ಕೆ

August 23, 2021
10:56 AM

ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಗೆ ಶ್ರಮಿಸುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು (ರಿ) ವಾರ್ಷಿಕವಾಗಿ ನೀಡುವ ಪರಮೇಶ್ವರ ಭಟ್ಟ ಬಾಳಿಲ ಪ್ರಶಸ್ತಿಗೆ ಈ ಬಾರಿ (2021–22) ಉತ್ತರ ಕನ್ನಡದ ಕುಮಟಾದ ಸಾಹಿತಿ ನಾರಾಯಣ ಕೃಷ್ಣ ಶಾನುಭಾಗ ಅವರು ಆಯ್ಕೆಯಾಗಿದ್ದಾರೆ.

Advertisement
Advertisement
Advertisement

ಹವ್ಯಕ ಭಾಷೆಯಲ್ಲಿ ಸಾಹಿತ್ಯ ಕೃಷಿ ಮಾಡಿರುವವರನ್ನುಗುರುತಿಸಿ, ಸಾಹಿತಿ ಪರಮೇಶ್ವರ ಭಟ್ಟ ಬಾಳಿಲ ಅವರ ಹೆಸರಿನಲ್ಲಿ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು 5000 ನಗದು, ಫಲಕ, ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement

ಪ್ರಶಸ್ತಿ ಪುರಸ್ಕೃತರ ಪರಿಚಯ: ಕುಮಟಾ ತಾಲ್ಲೂಕಿನ ವಾಲಗಳ್ಳಿಯಲ್ಲಿ ನಾರಾಯಣಕೃಷ್ಣ ಶಾನುಭಾಗರು ಕೃಷ್ಣ ಶಾನುಭೋಗ ಹಾಗೂ ಮಹಾದೇವಿದಂಪತಿಯ ಮೊದಲ ಮಗ.
ಕೃಷಿಕ ಕುಟುಂಬದಿಂದ ಬಂದವರಾದ ಶಾನುಭೋಗರು ಪ್ರಾಥಮಿಕ ಶಿಕ್ಷಣವನ್ನು ವಾಲಗಳ್ಳಿ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಕೂಜಳ್ಳಿಯಲ್ಲಿ ಪಡೆದರು. ಕಾರವಾರದ ಸರಕಾರಿ ಪಾಲಿಟೆಕ್ ಕಾಲೇಜಿನಲ್ಲಿ ಸಿವಿಲ್ಇಂ ಜಿನಿಯರಿಂಗ್ನಲ್ಲಿ ಡಿಪ್ಲೊಮಾ, ಅದೇ ಕಾಲೇಜು, ಬೆಳಗಾವಿ ಪಾಲಿಟೆಕ್ನಿಕ್ನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಎಎಂಐಐ ಇಂಜಿನಿಯರಿಂಗ್ ಪದವಿ.  1973ರಲ್ಲಿ ಕರ್ನಾಟಕ ವಿದ್ಯುತ್ ನಿಗಮದಲ್ಲಿ ಇಂಜಿನಿಯರ್ ಆಗಿ ಸೇವೆ ಆರಂಭಿಸಿ ಕಾರ್ಯಪಾಲಕ ಇಂಜಿನಿರ್‌ ಆಗಿ ಮುಂದೆ 2001 ರಲ್ಲಿ ನಿವೃತ್ತಿಯಾದರು.
ಹವ್ಯಕ ಮಹಾಸಭೆಯ ಹವ್ಯಕ ಅಧ್ಯಯನ ಕೇಂದ್ರದ ಸ್ಥಾಪಕ ಪ್ರಧಾನ ನಿರ್ದೇಶಕರಾಗಿ 10 ವರ್ಷಗಳ ಕಾಲ ಸೇವೆಸಲ್ಲಿಸಿರುವ ನಾರಾಯಣ ಕೃಷ್ಣ ಶಾನುಭಾಗರು, 22 ಪುಸ್ತಕಗಳು ಪ್ರಕಟಣೆಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ |
January 23, 2025
8:49 PM
by: The Rural Mirror ಸುದ್ದಿಜಾಲ
ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು
January 23, 2025
10:59 AM
by: The Rural Mirror ಸುದ್ದಿಜಾಲ
ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ
January 23, 2025
10:50 AM
by: The Rural Mirror ಸುದ್ದಿಜಾಲ
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆ – ಸರ್ಕಾರ ಒಪ್ಪಂದ | ಕಾಫಿ ಉದ್ಯಮ ಉತ್ತೇಜಿಸಲು ಮಹತ್ವದ ಹೆಜ್ಜೆ |
January 23, 2025
10:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror