ಸೋಮವಾರಪೇಟೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸೋಮವಾರಪೇಟೆ ಅರಣ್ಯ ವಲಯದ ಆಶ್ರಯದಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಕೊಡಗು ಜಿಲ್ಲಾ ಘಟಕ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿಯ ಸಹಯೋಗದೊಂದಿಗೆ ಸೋಮವಾರಪೇಟೆಯ ಚೌಡ್ಲು ಸರ್ಕಾರಿ ಪ್ರೌಢಶಾಲೆಯ ಅನನ್ಯ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ತಾಲೂಕು ಮಟ್ಟದ ಪರಿಸರ ಜಾಗೃತಿ ಆಂದೋಲನದ ಅಂಗವಾಗಿ ‘ಒಂದೇ ಒಂದು ಭೂಮಿ ‘ ಎಂಬ ಘೋಷಣೆಯಡಿ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು.
ಪರಿಸರ ಜಾಥಾಕ್ಕೆ ತಹಶೀಲ್ದಾರ್ ಗೋವಿಂದರಾಜು ಚಾಲನೆ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಗೋಪಾಲ್, ಪ್ರಧಾನ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ವಕೀಲರ ಸಂಘದ ಅಧ್ಯಕ್ಷ ಪದ್ಮನಾಭ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್,ಪರಿಸರ ಜಾಥಾದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ವಿವಿಧ ಘೋಷಣಾ ಫಲಕಗಳನ್ನು ಹಿಡಿದು ಪರಿಸರ ಘೋಷಣೆಗಳನ್ನು ಕೂಗಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…