ದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ಮೋದಿ ಉದ್ಘಾಟಿಸಬಾರದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೇ ಅನಾವರಣಗೊಳಿಸಬೇಕು ಎಂದು ವಿರೋಧ ಪಕ್ಷಗಳು ಪಟ್ಟು ಹಿಡಿದಿವೆ. ಅಷ್ಟೇ ಅಲ್ಲದೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಇದರ ನಡುವೆಯೇ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಲು ಬೇರೆ ಎರಡು ಪಕ್ಷಗಳು ಸಮ್ಮತಿ ಕೂಡ ಸೂಚಿಸಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಿಜು ಜನತಾ ದಳ ಮತ್ತು ವೈಎಸ್‌ಆರ್‌ಸಿಪಿ ಎರಡೂ ಪಕ್ಷಗಳು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರ್ಧಾರವನ್ನು ಬುಧವಾರ ಪ್ರಕಟಿಸಿದವು. ನೂತನ ಸಂಸತ್ತಿನ ಉದ್ಘಾಟನೆ ಮೇ 28 ರಂದು ನಡೆಯಲಿದೆ. ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಸೇರಿದಂತೆ 19 ವಿರೋಧ ಪಕ್ಷಗಳು ಬುಧವಾರ ಜಂಟಿ ಹೇಳಿಕೆ ನೀಡಿ ಬಹಿಷ್ಕಾರವನ್ನು ಘೋಷಿಸಿವೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel