ಪಟ್ಟೆ ವಿದ್ಯಾ ಸಮಿತಿ (ರಿ)ಯಿಂದ ನಡೆಸಲ್ಪಡುವ ಪ್ರತಿಭಾ ಪ್ರೌಢ ಶಾಲೆ ಪಟ್ಟೆ ಹಾಗೂ ಶ್ರೀ ಕೃಷ್ಣ ವಿದ್ಯಾ ಸಮಿತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ ಇದರ ಆಡಳಿತ ಹಸ್ತಾಂತರ ಕಾರ್ಯಕ್ರಮವು ಪಟ್ಟೆ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಜರುಗಿತು. ಪಟ್ಟೆ ವಿದ್ಯಾ ಸಂಸ್ಥೆಗಳ ನೂತನ ಆಡಳಿತ ಮಂಡಳಿಯಾಗಿ ಪುತ್ತೂರಿನ ಖ್ಯಾತ ನಿರ್ಮಾಣ ಸಂಸ್ಥೆಯಾದ ದ್ವಾರಕಾ ಕಾರ್ಪೋರೇಶನ್ ಪ್ರೈವೇಟ್ ಲಿಮಿಟೆಡ್‌ನ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ಇವರು ಅಧಿಕಾರ ವಹಿಸಿಕೊಂಡರು.
ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕಿ ಕೆ ಶಂಕರಿ ಇವರು ಸಂಸ್ಥೆಯ ಕುರಿತು ಮಾತನಾಡಿ ಶುಭ ಹಾರೈಸಿದರು. ಬಳಿಕ ವಿದ್ಯಾ ಸಂಸ್ಥೆಗಳ ನೂತನ ಸಂಚಾಲಕ ವಿಘ್ನೇಶ್ ಹಿರಣ್ಯ ಇವರು ಮಾತನಾಡಿ, ದ್ವಾರಕಾ ಸಂಸ್ಥೆಯ ಧ್ಯೇಯೋದ್ದೇಶಗಳು ಹಾಗೂ ಶೈಕ್ಷಣಿಕ ರೂಪುರೇಶೆಗಳ ಸಂಕ್ಷಿಪ್ತ ವಿವರಣೆಯನ್ನು ನೀಡಿದರು.
ದ್ವಾರಕಾ ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಮಾತನಾಡಿ ಪಟ್ಟೆ ವಿದ್ಯಾಸಂಸ್ಥೆಗಳ ಹಿರಿಮೆಯನ್ನು ಸ್ಮರಿಸಿ, ಮುಂದಿನ ದಿನಗಳಲ್ಲಿ ವಿದ್ಯಾಲಯವು ಶೈಕ್ಷಣಿಕವಾಗಿ ಇನ್ನಷ್ಟು ವಿಸ್ತಾರವನ್ನು ಕಾಣಲಿದೆ ಎಂದರು. ಈ ಸಂಸದರ್ಭದಲ್ಲಿ ಸಂಸ್ಥೆಯ ನಿಕಟಪೂರ್ವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರನ್ನು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರನ್ನು ದ್ವಾರಕಾ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ನಿಕಟಪೂರ್ವ ಆಡಳಿತ ಮಂಡಳಿಯ ಅಧ್ಯಕ್ಷರಾದ ವೇಣುಗೋಪಾಲ್ ಭಟ್ ಪಟ್ಟೆ, ಸಂಚಾಲಕರಾದ ನಾರಾಯಣ ಭಟ್ ಪಟ್ಟೆ ಹಾಗೂ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಉಪಾಧ್ಯಕ್ಷರಾದ ಅಮೃತಕೃಷ್ಣ ಎನ್, ಸಂಚಾಲಕರಾದ ವಿಘ್ನೇಶ್ ಹಿರಣ್ಯ, ಸದಸ್ಯರಾದ ಗಣರಾಜ ಕುಂಬ್ಳೆ ಉಪಸ್ಥಿತರಿದ್ದರು. ಸಮಾರಂಭದಲ್ಲಿ ನೂತನ ಆಡಳಿತ ಮಂಡಳಿಯ ಸದಸ್ಯರಾದ ಅಶ್ವಿನಿ ಎನ್, ಅಮೃತಾ ಎಸ್ ಶಾನ್‌ಭಾಗ್, ಪರಮೇಶ್ವರ ಭಟ್, ವೆಂಕಟಕೃಷ್ಣ ಶರ್ಮ ಹಾಗೂ ನಿಕಟ ಪೂರ್ವ ಆಡಳಿತ ಮಂಡಳಿಯ ಎಲ್ಲಾ ಸದಸ್ಯರುಗಳು ಉಪಸ್ಥಿತರಿದ್ದರು.
ನಿಕಟಪೂರ್ವ ಆಡಳಿತ ಮಂಡಳಿಯ ಅಧ್ಯಕ್ಷರಾದ ವೇಣುಗೋಪಾಲ್ ಭಟ್ ಪಟ್ಟೆ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ರಾಜಗೋಪಾಲ್ ನಿರೂಪಿಸಿ, ಪ್ರತಿಭಾ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ ಸುಮನ ವಂದಿಸಿದರು.
ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…