ತನ್ನ ಊರಿಗೆ ಸರಿಯಾದ ರಸ್ತೆ ಕೇಳಿದ್ದಕ್ಕೆ ಶಾಸಕರೊಬ್ಬರು ಹಲ್ಲೆ ಮಾಡಿದ ಘಟನೆ ಈ ಚರ್ಚೆಗೆ ಕಾರಣವಾಗಿದೆ. ಪಾವಗಡದ ಶಾಸಕ ವೆಂಕಟರಮಣಪ್ಪ ಅವರು ತನ್ನ ಕ್ಷೇತ್ರದ ಮತದಾರನಿಗೆ ಹಲ್ಲೆ ಮಾಡಿರುವ ಶಾಸಕ. ಘಟನೆಯ ಬಳಿಕ ಪ್ರತಿಕ್ರಿಯೆ ನೀಡಿದ ಶಾಸಕ ವೆಂಕಟರಮಣಪ್ಪ, ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಅನೇಕರು ಈ ಘಟನೆಯನ್ನು ಖಂಡಿಸಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ಪ್ರದೇಶದ ತಮ್ಮ ಗ್ರಾಮದಲ್ಲಿ ರಸ್ತೆಗಳ ಕಳಪೆ ಗುಣಮಟ್ಟದ ಬಗ್ಗೆ ಯುವಕ ಶಾಸಕರಿಗೆ ಪ್ರಶ್ನಿಸಿದ್ದರು. ಇದರಿಂದ ಕೋಪಗೊಂಡ ವೆಂಕಟರಮಣಪ್ಪ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ.ಈ ಘಟನೆ ವಿಡಿಯೋದಲ್ಲಿ ದಾಖಲಾಗಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ವೆಂಕಟರಮಣಪ್ಪ ಅವರು ಈಗಾಗಲೇ ರಸ್ತೆ ದುರಸ್ತಿಗೆ ಅನುದಾನ ಒದಗಿಸಲಾಗಿದೆ. ರಸ್ತೆ ಕೇಳಿದ್ದಕ್ಕೆ ಹಲ್ಲೆ ಮಾಡಿಲ್ಲ, ಏರುಧ್ವನಿಯಲ್ಲಿ ಮಾತನಾಡಿರುವುದಾಗಿ ಹೇಳಿದ್ದಾರೆ. ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ತಿಳಿಸಿದ ನಂತರ ಯುವಕನೂ ಮಾನಸಿಕ ಅಸ್ವಸ್ಥ ಎಂದು ಹೇಳಿಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…