ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ತೆಲುಗು ಸೂಪರ್ ಸ್ಟಾರ್ ಪವನ್ ಕಲ್ಯಾಣ್ ಅವರು ಮಂಗಳವಾರ ಭೇಟಿ ನೀಡಿದರು. ದೇವಾಲಯದಲ್ಲಿ ಆಶ್ಲೇಷಾ ಬಲಿ ಪೂಜೆ ಹಾಗೂ ಆದಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಸ್ತ್ರ ಸಮರ್ಪಣೆ ಸಮರ್ಪಿಸಿ ಪ್ರಾರ್ಥಿಸಿದರು. ಇದೇ ವೇಳೆ ದೇವಸ್ಥಾನದ ಭೂ ಸುಪೋಷಣ್ ಕಾರ್ಯಕ್ರಮದಲ್ಲಿ ಭಾಗವಹಿಸಿ , ಸಸಿಯನ್ನು ನೆಟ್ಟರು.
ಇದೇ ವೇಳೆ ದೇವಾಲಯದ 500 ಕ್ಕೂ ಮಿಕ್ಕಿದ ನೌಕರರು ಆಡಳಿತ ಮಂಡಳಿಯೊಂದಿಗೆ ಸೇರಿ ಪ್ರತಿ ಏಕಾದಶಿಯಂದು ನಡೆಯುವ ಸ್ವಚ್ಛ ಮಂದಿರ ಸೇವಾ ಅಭಿಯಾನದ ಬಗ್ಗೆ ಮಾಹಿತಿ ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ದೇವಾಲಯದ ಪಾವಿತ್ರತೆ ಹಾಗೂ ಪರಂಪರೆಯನ್ನು ಮುಂದುವರಿಸೋಣ ಎಂದರು.
ವಿಶೇಷವಾಗಿ ದೇವಾಲಯಕ್ಕೆ ಬರುವ ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಮನವಿ ಮಾಡಿದರು. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಲ್ಲೆಂದಲ್ಲಿ ಎಸೆದು ನಾಗ ಸಂಕುಲಗಳಿಗೆ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…