ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪೇಸಿಎಂ ಅಭಿಯಾನವು ಈಗ ಗ್ರಾಮೀಣ ಭಾಗದಲ್ಲೂ ಸದ್ದು ಮಾಡುತ್ತಿದೆ. ಸುಳ್ಯ ತಾಲೂಕಿನ ಮರ್ಕಂಜ, ದೊಡ್ಡತೋಟ ಸೇರಿದಂತೆ ಅಲ್ಲಲ್ಲಿ ಪೇಸಿಎಂ ಪೋಸ್ಟರ್ ಕಂಡುಬಂದಿದೆ.
‘ಪೇಸಿಎಂ- ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್ ಬುಧವಾರ ಅಭಿಯಾನ ನಡೆಸಿತ್ತು. ಇದು ದೇಶದಾದ್ಯಂತ ಸದ್ದು ಮಾಡಿತ್ತು. ಈಗ ಅದೇ ಅಭಿಯಾನ ಬಿಸಿಯು ಗ್ರಾಮೀಣ ಭಾಗದಲ್ಲೂ ಕಂಡುಬಂದಿದೆ. ಬುಧವಾರ ಅಭಿಯಾನ ಆರಂಭವಾದ ಬಳಿಕ ಇದು ಕರ್ನಾಟಕದ ಹೆಸರು ಕೆಡಿಸುವ ಹುನ್ನಾರ ಇದು ಎಂದು ಮುಖ್ಯಮಂತ್ರಿ ಸಹಿತ ವಿವಿಧ ಬಿಜೆಪಿ ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ನ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿಯು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರಗಳಿದ್ದ ಮಾದರಿ ಸಿದ್ಧಪಡಿಸಿ, ‘ರಾಜ್ಯವನ್ನು ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ’ ಎಂದು ಮತ್ತೊಂದು ಪೋಸ್ಟರ್ ಬಿಡುಗಡೆ ಮಾಡಿತ್ತು.
ಇದೀಗ ಪೇಸಿಎಂ ಕೋಡ್ ಅಧಿಕೃತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಈ ಕೋಡ್ ಬಳಕೆ ಮಾಡಲು ಚಿಂತನೆ ನಡೆಯುತ್ತಿದೆ. ಇದಕ್ಕಾಗಿ ವಿಶೇಷ ಆಪ್ ತೆರೆಯುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…