Advertisement
ಸುದ್ದಿಗಳು

ಗ್ರಾಮೀಣ ಭಾಗಕ್ಕೂ ತಲಪುದ ಪೇಸಿಎಂ ಪೋಸ್ಟರ್..! |

Share

ಬೆಂಗಳೂರಿನಲ್ಲಿ ನಡೆಯುತ್ತಿದ್ದ ಪೇಸಿಎಂ ಅಭಿಯಾನವು ಈಗ ಗ್ರಾಮೀಣ ಭಾಗದಲ್ಲೂ ಸದ್ದು ಮಾಡುತ್ತಿದೆ. ಸುಳ್ಯ ತಾಲೂಕಿನ ಮರ್ಕಂಜ, ದೊಡ್ಡತೋಟ ಸೇರಿದಂತೆ ಅಲ್ಲಲ್ಲಿ ಪೇಸಿಎಂ ಪೋಸ್ಟರ್‌ ಕಂಡುಬಂದಿದೆ. 

‘ಪೇಸಿಎಂ- ಇಲ್ಲಿ ಶೇ 40 ಸ್ವೀಕರಿಸಲಾಗುವುದು’ ಎಂಬ ಶೀರ್ಷಿಕೆಯಡಿ ಕಾಂಗ್ರೆಸ್​ ಬುಧವಾರ  ಅಭಿಯಾನ ನಡೆಸಿತ್ತು. ಇದು ದೇಶದಾದ್ಯಂತ ಸದ್ದು ಮಾಡಿತ್ತು. ಈಗ ಅದೇ ಅಭಿಯಾನ ಬಿಸಿಯು ಗ್ರಾಮೀಣ ಭಾಗದಲ್ಲೂ ಕಂಡುಬಂದಿದೆ. ಬುಧವಾರ ಅಭಿಯಾನ ಆರಂಭವಾದ ಬಳಿಕ ಇದು ಕರ್ನಾಟಕದ ಹೆಸರು ಕೆಡಿಸುವ ಹುನ್ನಾರ ಇದು ಎಂದು ಮುಖ್ಯಮಂತ್ರಿ ಸಹಿತ ವಿವಿಧ ಬಿಜೆಪಿ ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್​ನ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿಯು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಚಿತ್ರಗಳಿದ್ದ  ಮಾದರಿ ಸಿದ್ಧಪಡಿಸಿ, ‘ರಾಜ್ಯವನ್ನು ಲೂಟಿ ಮಾಡಿ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂದ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ’ ಎಂದು ಮತ್ತೊಂದು ಪೋಸ್ಟರ್​ ಬಿಡುಗಡೆ ಮಾಡಿತ್ತು.

ಇದೀಗ ಪೇಸಿಎಂ ಕೋಡ್‌ ಅಧಿಕೃತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ ಈ ಕೋಡ್‌ ಬಳಕೆ ಮಾಡಲು ಚಿಂತನೆ ನಡೆಯುತ್ತಿದೆ. ಇದಕ್ಕಾಗಿ ವಿಶೇಷ ಆಪ್‌ ತೆರೆಯುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

8 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

13 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago