#PayFarmer | “ಪೇ ಸಿಎಂ” ಅಭಿಯಾನದ ಜೊತೆಗೇ ಆರಂಭವಾಯ್ತು “ಪೇ ಫಾರ್ಮರ್‌” ಅಭಿಯಾನ…! |

September 25, 2022
3:48 PM

ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್‌ ತಯಾರಿಸಿ ಕಾಂಗ್ರೆಸ್‌ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್‌ ( Pay Farmer) ಪೋಸ್ಟರ್‌ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.

ರಾಜ್ಯ ರೈತ ಸಂಘವು ಪೇಟಿಎಂ ಕೋಡ್‌ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror