ಕಾಂಗ್ರೇಸ್ ವತಿಯಿಂದ ಪೇ ಸಿಎಂ ಅಭಿಯಾನ ನಡೆದ ಬಳಿಕ ಬಿಜೆಪಿ ಕೂಡಾ ಪೋಸ್ಟರ್ ತಯಾರಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಸೆಟೆದು ನಿಂತಿದೆ. ಇದೀಗ ರೈತರ ಸಂಕಷ್ಟವನ್ನು ಗಮನಸೆಳೆಯಲು ಪೇ ಫಾರ್ಮರ್ ( Pay Farmer) ಪೋಸ್ಟರ್ ಅಭಿಯಾನ ರೈತರಿಂದ ಆರಂಭವಾಗಿದೆ. ಎರಡೂ ಪಕ್ಷಗಳನ್ನು ರೈತ ಸಂಘವು ತರಾಟೆಗೆ ತೆಗೆದುಕೊಂಡಿದೆ.
ರಾಜ್ಯ ರೈತ ಸಂಘವು ಪೇಟಿಎಂ ಕೋಡ್‌ನಂತೆ ಪೇ ಫಾರ್ಮರ್ ಕ್ಯೂ ಆರ್ ಕೋಡ್ ಪೋಸ್ಟರ್ ರಿಲೀಸ್ ಮಾಡಿದ್ದು ತಾವು ಬೆಳೆದ ಬೆಳೆಗಳಿಗೆ ತಕ್ಕ ಬೆಲೆ ನೀಡುವಂತೆ ಆಗ್ರಹಿಸಿದ್ದಾರೆ.ರೈತರು ಬೆಳೆದ ಬೆಳೆಗೆ ಉತ್ತಮ ಧಾರಣೆ ಲಭ್ಯವಾಗುವಂತೆ ಮಾಡಲು ಒತ್ತಾಯ ಮಾಡಿದ್ದಾರೆ. ರಾಜಕೀಯ ನಾಯಕರೆಲ್ಲಾ ಒಂದೇ ನಾಣ್ಯದ ಎರಡು ಮುಖಗಳು. ನೀವು ಯಾರೇ ಅಧಿಕಾರಕ್ಕೆ ಬಂದರೂ ರೈತರ ಕಷ್ಟ ಕಾರ್ಪಣ್ಯ ಬಗೆಹರಿಸುವ ಮನಸ್ಸಿಲ್ಲ. ಬರೇ ಅಧಿಕಾರಕ್ಕಾಗಿ ಹಪಹಪಿಸುತ್ತಿದ್ದೀರಿ. ಇನ್ನೂ ಕೆಲವರು ಅಧಿಕಾರ ಉಳಿಸಲು ಸರ್ಕಸ್ ಮಾಡಿಕೊಳ್ಳುತ್ತಿದ್ದೀರಿ ಎಂದು ರೈತ ಸಂಘ ಕುಟುಕಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…