ಕಡಬದಲ್ಲಿ ಅಪರೂಪದ ಬೃಹತ್ ಶಿಲಾಯುಗ ಸಮಾಧಿ ಪತ್ತೆ |

April 26, 2022
2:16 PM

ಅಪರೂಪದ ಗುಹಾ ಸಮಾಧಿ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ, ರಾಮಕುಂಜ ಗ್ರಾಮದ ಆತೂರು-ಕುಂಡಾಜೆಯ ಸರ್ಕಾರಿ ಗೇರುಬೀಜದ ತೋಟದಲ್ಲಿ ಕಂಡು ಬಂದಿದೆ.

Advertisement
Advertisement
Advertisement

ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಇತಿಹಾಸ ಮತ್ತು ಪುರಾತತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಟಿ. ಮುರುಗೇಶಿಯವರು ಅಧ್ಯಯನ ವರದಿಯ ಬಗ್ಗೆ ತಿಳಿಸಿದ್ದು, ಶಿಲಾಯುಗ ಸಂಸ್ಕೃತಿಯು, ಕರ್ನಾಟಕವೂ ಒಳಗೊಂಡಂತೆ ದಕ್ಷಿಣ ಭಾರತದ ಒಂದು ಪ್ರಮುಖ ಇತಿಹಾಸಪೂರ್ವ ಯುಗದ ಸಂಸ್ಕೃತಿಯಾಗಿದೆ. ಇದು ಸಮಾಧಿ ಪ್ರಧಾನ ಸಂಸ್ಕೃತಿಯಾಗಿದ್ದು, ತನ್ನ ವೈವಿಧ್ಯಮಯ ಸಮಾಧಿಗಳಿಂದಲೇ ಚಿರಪರಿಚಿತವಾಗಿದೆ. ಕರ್ನಾಟಕದ ಪಶ್ಚಿಮ ಕರಾವಳಿ ಮತ್ತು ಕೇರಳದಲ್ಲಿ ಈ ಸಂಸ್ಕೃತಿಗೆ ಸಂಬಂಧಿಸಿದ ವಿಶಿಷ್ಠ ಮಾದರಿಯ ಗುಹಾ ಸಮಾಧಿಗಳನ್ನು ಕೆಂಪು ಮುರಕಲ್ಲಿನಲ್ಲಿ ಅಗೆದು ಮಾಡಲಾಗಿದೆ ಎಂದು ಪ್ರೊ. ಟಿ. ಮುರುಗೇಶಿ ಹೇಳುತ್ತಾರೆ.

Advertisement

ಗುಹಾ ಸಮಾಧಿಗಳು ಎಂದರೆ ಏನು? : ಗುಹಾ ಸಮಾಧಿಗಳು, ಬೃಹತ್ ಶಿಲಾಯುಗ ಕಾಲದಲ್ಲಿ ರಚಿಸಲಾದ ಸಮಾಧಿಗಳು. ಸಮಾಧಿಯ ಮಧ್ಯಭಾಗದಲ್ಲಿ ಸುಮಾರು ಎರಡರಿಂದ ಮೂರು ಅಡಿ ವ್ಯಾಸದ ರಂಧ್ರವನ್ನು ಸುಮಾರು ಒಂದು ಮೀಟರ್ ಆಳದ ವರೆಗೆ ಸಿಲಿಂಡಿರ್ ಆಕಾರದಲ್ಲಿ ಕೆಂಪು ಮುರಕಲ್ಲಿನ ಭೂ ಪಾತಳಿಯಲ್ಲಿ ಕೊರೆಯಲಾಗುತ್ತದೆ. ಇದರ ಕೆಳಭಾಗದಲ್ಲಿ ಅರ್ಧಗೋಳಾಕೃತಿಯ ಗುಹೆಯನ್ನು ಅಗತ್ಯವಾದ ಆಳ ಹಾಗೂ ಸುತ್ತಳತೆಯೊಂದಿಗೆ ಅಗೆದು ರಚಿಸಲಾಗುತ್ತದೆ. ಇದು ಬಹುತೇಕ ಬೌದ್ಧ ಧರ್ಮದ ಸ್ಥೂಪಗಳ ರಚನೆಯನ್ನು ಹೋಲುತ್ತದೆ. ಕರ್ನಾಟಕದ ಕರಾವಳಿಯಲ್ಲಿ ಇಂತಹ ರಚನೆಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಕೇರಳದಲ್ಲಿ, ಗುಹಾ ಸಮಾಧಿಗಳ ಪಾಶ್ರ್ವದಲ್ಲಿ ಒಂದು ಪ್ರವೇಶದ್ವಾರ ಇರುತ್ತದೆ. ಈ ಪ್ರವೇಶದ್ವಾರವನ್ನು ಆಯತಾಕಾರದಲ್ಲಿ ಬಾಗಿಲ ದಾರಂದಂತೆ ರಚಿಸಲಾಗಿರುತ್ತದೆ. ಆದರೆ, ಎರಡೂ ಕಡೆ ಸಮಾಧಿಯ ಮಧ್ಯಭಾಗದಲ್ಲಿ ಎರಡು ಅಥವಾ ಮೂರು ಅಡಿಯ ವ್ಯಾಸದ ರಂಧ್ರ ಸಾಮಾನ್ಯವಾಗಿ ಕಂಡು ಬರುತ್ತದೆ.

Advertisement

ಕಡಬದ ಗುಹಾ ಸಮಾಧಿಯ ವಿಶೇಷತೆ: ಸಾಮಾನ್ಯವಾಗಿ, ಬೃಹತ್ ಶಿಲಾಯುಗದ ಸಮಾಧಿಗಳ ಇರುವನ್ನು ಗುರತಿಸಲು, ಆ ಕಾಲದಲ್ಲಿ ಸಮಾಧಿಯ ಮೇಲೆ ಅಥವಾ ಸಮಾಧಿಯ ಸಮೀಪದಲ್ಲಿ, ದೊಡ್ಡ, ದೊಡ್ಡ ಕಲ್ಲಿನ ಕಂಭಗಳನ್ನು ನಿಲ್ಲಿಸುತ್ತಿದ್ದರು, ಇಲ್ಲವೇ, ಸಮಾಧಿಯ ಮೇಲ್ಭಾಗದಲ್ಲಿ ದೊಡ್ಡ, ದೊಡ್ಡ ಕಾಡು ಕಲ್ಲುಗಳ ಶಿಲಾ ವರ್ತುಲವನ್ನು ರಚಿಸುತ್ತಿದ್ದರು, ಕೆಲವು ಕಡೆ ಸಮಾಧಿಯ ಮೇಲೆ ಕಲ್ಲುಗಳ ರಾಶಿಯನ್ನು ಹೇರಿ, ಕಲ್ಗುಪ್ಪೆಗಳನ್ನು ನಿರ್ಮಿಸಿ ಸಮಾಧಿಗಳ ಇರುವನ್ನು ನಿರ್ದೇಶಿಸಲಾಗಿದೆ.

Advertisement

ಆದರೆ, ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಒಂದು ದೊಡ್ಡ ವೃತ್ತವನ್ನು ಕೆಂಪು ಮುರಕಲ್ಲಿನ ಮೇಲೆ ರಚಿಸಿ, ಸಮಾಧಿಯ ಇರುವನ್ನು ಗುರುತಿಸಿರುವುದು ಕಡಬದ ಗುಹಾ ಸಮಾಧಿಯ ವಿಶೇಷತೆಯಾಗಿದೆ. ಆ ವೃತ್ತದ ಕೆಳಭಾಗದಲ್ಲಿ ಆ ವೃತ್ತದ ವಿಸ್ತಾರಕ್ಕೆ ಅನುಗುಣವಾಗಿ ಗುಹೆಯನ್ನು ರಚಿಸಲಾಗಿದೆ. ಆ ವೃತ್ತದ ವಿಸ್ತಾರ ಸುಮಾರು ಏಳು ಅಡಿಯಾಗಿದ್ದು, ಕೆಳಗಿನ ಗುಹೆಯೂ ಏಳು ಅಡಿ ವಿಸ್ತಾರವಾಗಿದೆ. ಕೇರಳ ಮತ್ತು ಕರ್ನಾಟಕದ ಗುಹಾ ಸಮಾಧಿಗಳಲ್ಲಿ ಸಾಮಾನ್ಯವಾಗಿ ಕಂಡು ಬರುವ ರಂಧ್ರ, ಕಡಬದ ಗುಹಾ ಸಮಾಧಿಯಲ್ಲಿ ಇಲ್ಲ.

ಆದ್ದರಿಂದ, ಕಡಬದ ಸಮಾಧಿ ಒಂದು ಅಪರೂಪ ಹೊಸ ಮಾದರಿಯಾಗಿದೆ. ಗುಹೆಯ ಮಧ್ಯಭಾಗದಲ್ಲಿ ಅಗ್ನಿಕುಂಡವನ್ನು ಹೋಲುವ ಒಂದು ಗುಂಡಿ ಕಂಡು ಬಂದಿದ್ದು, ಇದೂ ಸಹ ಒಂದು ವಿಶೇಷ ಅಂಶವಾಗಿದೆ. ಸಮಾಧಿಯನ್ನು ಪೂರ್ವೋತ್ತರ ದಿಕ್ಕಿಗೆ ಅಭಿಮುಖವಾಗಿ ರಚಿಸಲಾಗಿದೆ. ಗುಹೆಯ ಒಳಭಾಗದಲ್ಲಿ ಅತ್ಯಲ್ಪ ಪ್ರಮಾಣದ ಕೆಂಪು, ಕಪ್ಪು ಮತ್ತು ಕೆಂಪು ಬಣ್ಣದ ಮಡಕೆಯ ಚಿಕ್ಕ, ಚಿಕ್ಕ ಚೂರುಗಳು ಕಂಡು ಬಂದಿವೆ. ಬಹುಶಃ ಸಮಾಧಿಯ ಅವಶೇಷಗಳನ್ನು ನಿಧಿಗಳ್ಳರು ದೋಚಿರುವಂತೆ ಕಂಡು ಬರುತ್ತದೆ ಎಂದು ಪ್ರೊ. ಟಿ. ಮುರುಗೇಶಿ ಅವರು ಹೇಳುತ್ತಾರೆ.

Advertisement

ಈ ಸಮಾಧಿ ಅಧ್ಯಯನದ ಸಂಧರ್ಭ  ಸ್ಥಳೀಯ ಆತಿಥ್ಯವನ್ನು ಒದಗಿಸಿದ ನಿಶ್ಚಿತ್ ಗೋಳಿತಡಿ ಮತ್ತು ಕುಟುಂಬದವರಿಗೆ, ವಾಹನ ಸೌಲಭ್ಯವನ್ನು ಒದಗಿಸಿದ ನ್ಯಾಷನಲ್ ಗೋಲ್ಡ್ ಮತ್ತು ಡೈಮಂಡ್ ನ ಮಾಲೀಕರಾದ ಯೂಸೂಫ್ ಹೈದರ್ ಅವರಿಗೆ ಹಾಗೂ ಈ ಸಮಾಧಿಯನ್ನು ಬೆಳಕಿಗೆ ತರುವಲ್ಲಿ ಬೆವರು ಹರಿಸಿದ  ವಿದ್ಯಾರ್ಥಿಗಳಾದ ಶ್ರೇಯಸ್, ಗೌತಮ್, ಶಾರೀಕ್, ಕಾರ್ತಿಕ್, ವಿಶಾಲ್ ರೈ ಮತ್ತು ದಿಶಾಂತ್ ರವರಿಗೆ ಕೃತಜ್ಞತೆ ಎಂದು ಪ್ರೊ. ಟಿ. ಮುರುಗೇಶಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ
November 24, 2024
12:05 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror