ತ್ಯಾಜ್ಯ ಎಸೆದು ಹೋದ ವ್ಯಕ್ತಿಗೆ 8 ಸಾವಿರ ರೂ ದಂಡ | ಸಿಸಿ ಕ್ಯಾಮಾರ ದೃಶ್ಯ ವೀಕ್ಷಿಸಿ ಪರಿಶೀಲನೆ | ರಸ್ತೆ ಬದಿ ತ್ಯಾಜ್ಯ ಎಸೆಯಬೇಡಿ |

October 14, 2022
2:32 PM

ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ  ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ. 

ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.

ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror