ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದು ಹೋಗಿದ್ದ ಸುಳ್ಯದ ನಿವಾಸಿಯೊಬ್ಬರಿಗೆ ರೂ. 8 ಸಾವಿರ ದಂಡ ವಿಧಿಸಿದ ಘಟನೆ ನಡೆದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಐವರ್ನಾಡು ಗ್ರಾಮ ಪಂಚಾಯತ್ ಪಿಡಿಓ ಶ್ಯಾಮ್ ಪ್ರಸಾದ್ ಅವರು ಬೇಂಗಮಲೆ ಪರಿಸರಕ್ಕೆ ಭೇಟಿ ನೀಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ವೀಕ್ಷಿಸಿ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲನೆ ನಡೆಸಿ ಬ್ಯಾಗ್ ಎಸೆದು ಹೋದ ವ್ಯಕ್ತಿ ಸುಳ್ಯದ ಶೈಲೇಶ್ ಮುರುಗನ್ ಅವರನ್ನು ಪತ್ತೆ ಹಚ್ಚಿ, ದಂಡ ವಿಧಿಸಿ, ತ್ಯಾಜ್ಯವನ್ನು ಎಸೆದವರಿಂದಲೇ ವಿಲೇವಾರಿ ಮಾಡಿಸಿದರು.
ಸಾರ್ವಜನಿಕ ಪ್ರದೇಶಗಳಲ್ಲಿ, ಅರಣ್ಯ ಪ್ರದೇಶಗಳಲ್ಲಿ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಬೇಕಿದೆ. ಈಗಾಗಲೇ ಸಾಕಷ್ಟು ಬಾರಿ ಎಚ್ಚರಿಕೆಯನ್ನೂ ನೀಡಲಾಗಿದೆ, ವಿವಿಧ ಇಲಾಖೆಗಳು ಜಾಗೃತವಾಗಿ ಈಗ ಕೆಲಸ ಮಾಡುತ್ತಿವೆ. ಸ್ವಚ್ಛ ಭಾರತದ ಕಲ್ಪನೆಯಲ್ಲಿ ಎಲ್ಲರ ಸಹಕಾರವೂ ಅಗತ್ಯವಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…